ಹೊಸನಗರ : ರಿಪ್ಪನ್ಪೇಟೆಯಲ್ಲಿ ನಡೆದ ತಾಲ್ಲೂಕು ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ಖೋಖೋ ಪಂದ್ಯಾವಳಿಯಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದ ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಈ ವಿದ್ಯಾರ್ಥಿಗಳಿಗೆ ಮತ್ತು ತರಬೇತುದಾರರಾದ ದೈಹಿಕ ಶಿಕ್ಷಕ ಸುಹಾಸ್ ಇವರಿಗೆ ಮುಖ್ಯ ಶಿಕ್ಷಕ ರೇಣುಕೇಶ್ ಕೆ, ಎಸ್ಡಿಎಂಸಿ ಅಧ್ಯಕ್ಷ ಅಶ್ವಿನಿ ಕುಮಾರ್ ಕೆ.ಕೆ ಮತ್ತು ಸದಸ್ಯರು, ಶಿಕ್ಷಕರು ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ್ದಾರೆ.







