ಹೊಸನಗರ ಕೊಡಚಾದ್ರಿ ಕಾಲೇಜಿನಲ್ಲಿ ಜಿಲ್ಲಾ ಲೋಕಾಯುಕ್ತರಿಂದ ಭ್ರಷ್ಟಾಚಾರ ವಿರುದ್ಧ ಜಾಗೃತಿ ಅರಿವು ಕಾರ್ಯಕ್ರಮ

By malnad tech

Published on:

Spread the love

ಹೊಸನಗರ ; ಪಟ್ಟಣದ ಕೊಡಚಾದ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕ ಒಂದು ಮತ್ತು ಎರಡರ ಸಹಯೋಗದೊಂದಿಗೆ ಜಿಲ್ಲಾ ಲೋಕಾಯುಕ್ತರಿಂದ ಭ್ರಷ್ಟಾಚಾರದ ವಿರುದ್ಧ ಅರಿವು ಮೂಡಿಸುವ ಕಾರ್ಯಕ್ರಮವು ಕಾಲೇಜಿನ ಪ್ರಾಚಾರ್ಯ ಡಾ. ಕೆ ಉಮೇಶ್ ಅಧ್ಯಕ್ಷತೆಯಲ್ಲಿ ನಡೆಯಿತು.

ಲೋಕಾಯುಕ್ತ ಕಚೇರಿಯ ಪೊಲೀಸ್ ಇನ್ಸ್‌ಪೆಕ್ಟರ್ ಕೆ.ಪಿ ರುದ್ರೇಶ್ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿ, ಭ್ರಷ್ಟಾಚಾರ ಎಂಬ ಪಿಡುಗು ಎಲ್ಲ ಇಲಾಖೆಗಳನ್ನು ಅಲ್ಲದೆ ಖಾಸಗಿ ಸಂಘ ಸಂಸ್ಥೆ ಕಚೇರಿಗಳಲ್ಲಿ ಹಬ್ಬಿದ ಇವುಗಳನ್ನು ಮಟ್ಟ ಹಾಕಲು ಜನರ ಜಾಗೃತರಾಗಬೇಕು ಈ ನಿಟ್ಟಿನಲ್ಲಿ ವಿದ್ಯಾರ್ಥಿ ಸಮೂಹ ಗ್ರಾಮೀಣ ಜನರಲ್ಲಿ ಅರಿವು ಮೂಡಿಸುವಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕೆಂದು ಕರೆ ನೀಡಿ, ಭ್ರಷ್ಟಾಚಾರ ಎಂಬ ಪೆಡಂಬೂತ ವಿಶ್ವ ವ್ಯಾಪಿಯಾಗಿದ್ದು ಈ ನಿಟ್ಟಿನಲ್ಲಿ ವಿದ್ಯಾರ್ಥಿ ಸಮೂಹ ಟೊಂಕಕಟ್ಟಿ ನಿಲ್ಲಬೇಕೆಂದರು.

ಈ ಸಮಾರಂಭದಲ್ಲಿ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ‌. ಕೆ ಎಸ್ ಮೇದಿನಿ, ಇತಿಹಾಸ ವಿಭಾಗದ ಮುಖ್ಯಸ್ಥ ರಾಜು, ವಾಣಿಜ್ಯ ವಿಭಾಗದ ರಾಕೇಶ್, ಶಾಲಿನಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದರು.

ಅಭಿಷೇಕ ಪ್ರಾರ್ಥಿಸಿದರು. ಬಿ ಟಿ ಸಂಗೀತ ಸ್ವಾಗತಿಸಿದರು. ನೇಸರ ಕಾರ್ಯಕ್ರಮ ನಿರೂಪಿಸಿದರು. ಸ್ಪೂರ್ತಿ ವಂದಿಸಿದರು.

Leave a comment