ಹೊಸನಗರ ; ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಹೊಸನಗರ ತಾಲೂಕು ಘಟಕದ ಅಧ್ಯಕ್ಷರಾಗಿ ಪ್ರಜಾವಾಣಿ ವರದಿಗಾರ ರವಿ ನಾಗರಕೊಡಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಮಂಗಳವಾರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಸಂಘದ ವಾರ್ಷಿಕ ಸರ್ವ ಸದಸ್ಯರ ಸಭೆಯಲ್ಲಿ ಚುನಾವಣಾ ಪ್ರಕ್ರಿಯೆ ನಡೆಯಿತು. ತಾಲೂಕು ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಅಶ್ವಿನಿ ಆರ್. ಪ್ರಭು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಇದರೊಂದಿಗೆ ಉಪಾಧ್ಯಕ್ಷರಾಗಿ ಪರಷುರಾಮ್, ಖಜಾಂಚಿಯಾಗಿ ಶಾಂತರಾಮ್, ಕಾರ್ಯದರ್ಶಿಯಾಗಿ ಮನು ಸುರೇಶ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪ್ರಕರ್ತರ ಸಂಘದ ಅಧ್ಯಕ್ಷ ವೈದ್ಯನಾಥ್ ಅವರ ಅಧ್ಯಕ್ಷತೆಯಲ್ಲಿ ಚುನಾವಣಾ ಪ್ರಕ್ರಿಯೆ ನಡೆಯಿತು.
ಈ ಸಂದರ್ಭದಲ್ಲಿ ನೂತನ ಅಧ್ಯಕ್ಷ ರವಿ ನಾಗರಕೊಡಿಗೆ ಮಾತನಾಡಿ, ನಮ್ಮ ಸಂಘವು ಹಲವಷ್ಟು ಗೊಂದಲ, ಆಘಾತ, ಅಡೆತಡೆಗಳನ್ನು ಸಮರ್ಪಕವಾಗಿ ಎದುರಿಸಿ ಮುನ್ನೆಡೆಯುತ್ತಿದೆ. ನನ್ನ ಮೇಲೆ ವಿಶ್ವಾಸವಿರಿಸಿ ಕೊಟ್ಟ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುತ್ತೇನೆ. ಇಲ್ಲಿ ಎಲ್ಲರ ಸಹಕಾರವೂ ಮುಖ್ಯ ಎಂದರು.
ನಂತರ ಪದಾಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದ ಸಂಘದ ಜಿಲ್ಲಾಧ್ಯಕ್ಷ ಎಚ್. ಯು. ವೈದ್ಯನಾಥ, ಸಂಘದ ಪ್ರತಿಯೊಬ್ಬ ಸದಸ್ಯರೂ ಸಂಘದ ಚಟುವಟಿಕೆಗಳಲ್ಲಿ ಸಕ್ರಿಯಾವಾಗಿ ಪಾಲ್ಗೊಳ್ಳುವ ಮೂಲಕ ಸಂಘವನ್ನು ಬಲಪಡಿಸಿಕೊಳ್ಳಬೇಕು. ಜೊತೆಗೆ ವಿವಿಧ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಿ ಸಂಘ ಸಕ್ರಿಯ ಸಂಘಟನೆ ಎಂಬುದನ್ನು ತೋರಿಸಬೇಕು. ಈ ನಿಟ್ಟಿನಲ್ಲಿ ರಾಜ್ಯ ಹಾಗೂ ಜಿಲ್ಲಾ ಸಂಘಗಳು ತಮ್ಮೊಂದಿಗೆ ನಿರಂತರ ಸಂಪರ್ಕದಲ್ಲಿದ್ದೆ ಸಹಕಾರವನ್ನು ನೀಡಲಿದೆ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆರ್.ಎಸ್ ಹಾಲಸ್ವಾಮಿ, ಜಿಲ್ಲಾ ಉಪಾಧ್ಯಕ್ಷ ಕೆ.ಎಸ್ ಹುಚ್ಚರಾಯಪ್ಪ, ಜಿಲ್ಲಾ ಕಾರ್ಯದರ್ಶಿ ದೀಪಕ್ ಸಾಗರ್, ಹಾಗೂ ಚುನಾವಣಾ ಅಧಿಕಾರಿ ಟೆಲೆಕ್ಸ್ ರವಿ ಕುಮಾರ್, ಹೊಸನಗರ ಉಸ್ತುವಾರಿ ಸತ್ಯನಾರಾಯಣ, ರೋಹಿತ್, ರಘುಶೆಟ್ಟಿ, ತಾಲೂಕು ಸಂಘದ ಮಾಜಿ ಅಧ್ಯಕ್ಷ ರವಿ ಬಿದನೂರು, ನರಸಿಂಹಮೂರ್ತಿ, ಚಿದಾನಂದ ಸ್ವಾಮಿ, ನಾಗೇಶ್ ನಾಯಕ್, ಶಶಿಕುಮಾರ್. ಉಪಸ್ಥಿತರಿದ್ದರು.







