ಬಾಳೆಹೊನ್ನೂರು ; ಕೇಂದ್ರ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಪ್ರಹ್ಲಾದ ಜೋಶಿ ಅವರು ಶನಿವಾರ ಬಾಳೆಹೊನ್ನೂರು ಶ್ರೀ ಜಗದ್ಗುರು ರಂಭಾಪುರಿ ಪೀಠಕ್ಕೆ ಭೇಟಿ ನೀಡಿದರು.

ಕ್ಷೇತ್ರನಾಥ ಶ್ರೀ ವೀರಭದ್ರಸ್ವಾಮಿ ಮತ್ತು ಶ್ರೀ ಜಗದ್ಗುರು ರೇಣುಕಾಚಾರ್ಯ ಮಂದಿರದಲ್ಲಿ ಪೂಜೆ ಸಲ್ಲಿಸಿದರು. ನಂತರ ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳವರ ದರ್ಶನಾಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಸಂಸದ ಕೋಟಾ ಶ್ರೀನಿವಾಸ ಪೂಜಾರಿ, ಮಾಜಿ ಸಚಿವ ಡಿ.ಎನ್.ಜೀವರಾಜ, ವಿಧಾನ ಪರಿಷತ್ ಸದಸ್ಯ ಮಾಜಿ ಸಚಿವ ಸಿ.ಟಿ.ರವಿ ಸೇರಿದಂತೆ ಹಲವಾರು ಗಣ್ಯರು ಉಪಸ್ಥಿತರಿದ್ದರು.







