ರಿಪ್ಪನ್ಪೇಟೆ ; ಹರತಾಳು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಲಿಂಗನಕೊಪ್ಪ-ನಂಜವಳ್ಳಿ
ಸಂಪರ್ಕದ ಅಂದಾಜು 20 ಲಕ್ಷ ರೂ. ವೆಚ್ಚದ ಸಿ.ಸಿ. ರಸ್ತೆ ಕಾಮಗಾರಿಗೆ ಶಾಸಕ ಹಾಗೂ ರಾಜ್ಯ ಅರಣ್ಯ ಕೈಗಾರಿಕಾಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಶಂಕುಸ್ಥಾಪನೆ ಮಾಡುವ ಮೂಲಕ ಚಾಲನೆ ನೀಡಿದರು.
ಹರತಾಳು ಗ್ರಾಮ ಪಂಚಾಯ್ತಿ ಅಧ್ಯಕ್ಷೆ ನಾಗರತ್ನ ವಾಸುದೇವ ಅಧ್ಯಕ್ಷತೆ ವಹಿಸಿದ್ದರು.
ಈ ಸಭೆಯಲ್ಲಿ ತಾಲ್ಲೂಕು ಬಗರ್ಹುಕುಂ ಸಮಿತಿಯ ಸದಸ್ಯೆ ಸಾಕಮ್ಮ ಮನೋಹರ, ಹೊಸನಗರ ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಆಧ್ಯಕ್ಷ ಚಂದ್ರಮೌಳಿ, ಹರತಾಳು ಗ್ರಾಮದ ಹಿರಿಯ ಮುಖಂಡ ಜಯಶೀಲಗೌಡ, ಹೊಸನಗರ ತಾಲ್ಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಚಿದಂಬರ್, ಉಪಾಧ್ಯಕ್ಷ ಕಣಕಿ ನಾರಾಯಣಪ್ಪ, ಗ್ರಾಮ ಪಂಚಾಯ್ತಿ ಸದಸ್ಯರಾದ ಶಿವಮೂರ್ತಿ, ನಾ.ರಿ.ರವಿ, ಸತ್ಯವತಿ, ಹರಿದ್ರಾವತಿ ಗ್ರಾಮ ಪಂಚಾಯ್ತಿ ಸದಸ್ಯ ಮಳವಳ್ಳಿ ಸಂತೋಷ, ತಹಸೀಲ್ದಾರ್ ಭರತರಾಜ ಕೆ.ಎನ್, ಸ್ವಸಹಾಯ ಸಂಘಗಳ ಮಹಿಳಾ ಒಕ್ಕೂಟದ ಅಧ್ಯಕ್ಷೆ ಮಂಜುಳಾ ಹಾಜರಿದ್ದರು.







