ರಿಪ್ಪನ್‌ಪೇಟೆ ; ಕೆಂಚನಾಲ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಗೌಡಕೊಪ ಎಸ್.ಸಿ.ಕಾಲೋನಿ ಸಂಪರ್ಕದ ರಸ್ತೆ 15 ಲಕ್ಷ ರೂ. ವೆಚ್ಚದ ರಸ್ತೆ ಅಭಿವೃದ್ದಿ ಕಾಮಗಾರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಶಂಕುಸ್ಥಾಪನೆ ನೆರವೇರಿಸಿದರು.
ಕೆಂಚನಾಲ ಗ್ರಾಮ ಪಂಚಾಯಿತ್ ಅಧ್ಯಕ್ಷ ಮಹಮದ್ ಷರೀಫ್ ಅಧ್ಯಕ್ಷತೆ ವಹಿಸಿದ್ದರು.
ಉಪಾಧ್ಯಕ್ಷೆ ಲಕ್ಷ್ಮಮ್ಮ, ಗ್ರಾಮ ಪಂಚಾಯಿತ್ ಸದಸ್ಯರಾದ ಪರಮೇಶ, ರಮ್ಯ,ಗೌರಮ್ಮ, ಪುಟ್ಟಮ್ಮ, ಉಷಾ, ಉಬೇದುಲಾ ಷರೀಫ್, ಮಂಜುನಾಥ, ಕೃಷ್ಣೋಜಿರಾವ್, ಲೋಕೋಪಯೋಗಿ ಇಲಾಖೆಯ ಎಇಇ ಸಂತೋಷ, ಜೆಇ ಸಿಂಧು, ಪಂಚಾಯಿತ್ ಅಭಿವೃದ್ದಿ ಅಧಿಕಾರಿಗಳು ಸಿಬ್ಬಂದಿವರ್ಗ ಹಾಜರಿದ್ದರು.







