ಶಿವಮೊಗ್ಗದಲ್ಲಿ ನಡೆದ ಜೋಡಿ ಕೊಲೆಗೆ ಪೊಲೀಸರ ನಿರ್ಲಕ್ಷ್ಯವೇ ಕಾರಣ ; ಶಾಸಕ ಚನ್ನಬಸಪ್ಪ

Written by Malnadtimes.in

Published on:

WhatsApp Group Join Now
Telegram Group Join Now

ಶಿವಮೊಗ್ಗ : ನಿನ್ನೆ ನಡೆದ ಗ್ಯಾಂಗ್‌ವಾರ್‌ನಲ್ಲಿ ಇಬ್ಬರು ಯುವಕರು ಹತ್ಯೆಯಾಗಿದ್ದು, ಇದಕ್ಕೆ ಪೊಲೀಸರ ವೈಫಲ್ಯವೇ ಕಾರಣ. ಜಿಲ್ಲಾ ರಕ್ಷಣಾಧಿಕಾರಿಗಳು ಜಾಗ ಖಾಲಿ ಮಾಡಲಿ ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ಇಂದು ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲೆಯಲ್ಲಿ ಶಾಂತಿಸುವ್ಯವಸ್ಥೆ ಇದೆ ಎಂದು ಹೇಳುತ್ತಾರೆ. ಆದರೆ ಕೊಲೆಗಳು ನಡೆಯುತ್ತಲೇ ಇವೆ. ಈ ಕೊಲೆಯ ಹಿಂದೆ ರೌಡಿಗಳ ಪಾತ್ರವಿದೆ. ಪೊಲೀಸ್ ಇಲಾಖೆಗೆ ಸಮಗ್ರ ಮಾಹಿತಿ ಇತ್ತು. ಚುನಾವಣೆಯ ದಿನ ಕೆಲವು ಕಡೆ ತಲವಾರುಗಳು ಹೊರಬಂದಿದ್ದವು. ಲಷ್ಕರ್ ಮೊಹಲ್ಲಾದಲ್ಲೂ ಕೂಡ ತಲವಾರುಗಳು ಇದ್ದವು ಎಂಬ ಸ್ಪಷ್ಟ ಮಾಹಿತಿ ಪೊಲೀಸರಿಗೆ ಗೊತ್ತಿತ್ತು. ಆದರೂ ಕೂಡ ಅವರು ಯಾವುದೇ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಿಲ್ಲ. ಒಂದಿಷ್ಟು ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದರೆ ನೆನ್ನೆ ನಡೆದ ಕೊಲೆಗಳನ್ನು ತಪ್ಪಿಸಬಹುದಿತ್ತು ಎಂದರು.

ಕೋಟೆ ಪೊಲೀಸ್‌ ಠಾಣೆಯ ಸಬ್‌ಇನ್ಸ್‌ಪೆಕ್ಟರ್ ಬೇಜವಬ್ದಾರಿಯಿಂದ ವರ್ತಿಸಿದ್ದಾರೆ ಅವರ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ. ಈ ಕೊಲೆ ಮಾಡಿದವರು ಹೊಳಲೂರಿನಲ್ಲಿ ಉಳಿದುಕೊಂಡಿದ್ದರು ಎಂಬ ಮಾಹಿತಿ ಇದೆ. ಅಲ್ಲದೆ ಯಲ್ಲಮ್ಮನ ದೇವಸ್ಥಾನದ ಬಳಿಯ ಹಿಂದುಗಳ ಮನೆಯೊಂದನ್ನು ಕೆಲವರು ಬಾಡಿಗೆ ತೆಗೆದುಕೊಂಡಿದ್ದಾರೆ. ಅಲ್ಲಿ ಅಕ್ರಮ ಚಟುವಟಿಕೆಗಳು ನಡೆಯುತ್ತವೆ ಎಂಬ ಮಾಹಿತಿಗಳು ಇವೆ. ಗಾಂಜಾ, ಅಫೀಮುಗಳ ಸಾಗಣಿಕೆ ಇದೆ. ಅದರ ಪರಿಣಾಮವೇ ಈ ರೀತಿಯ ಘಟನೆಗಳಿಗೆ ಕಾರಣವಾಗಿವೆ. ಕಳೆದ ಹಲವು ದಿನಗಳ ಹಿಂದೆ ಸರ್ಕಾರಿ ನೌಕರನೊಬ್ಬನ ಮೇಲೆ ಹಲ್ಲೆಯಾಗಿತ್ತು. ದೂರು ಕೊಟ್ಟರು ಕೂಡ ಯಾವುದೇ ಕ್ರಮ ಕೈಗೊಂಡಿಲ್ಲ. ಸರ್ಕಾರ ಕೂಡ ಸುಮ್ಮನಿದೆ ಎಂದು ದೂರಿದರು.

ಆಕಸ್ಮಾತ್ ಚುನಾವಣೆಯ ದಿನ ಇಂತಹ ಘಟನೆ ನಡೆದಿದ್ದರೆ ಏನಾಗುತ್ತಿತ್ತು ಎಂಬುವುದನ್ನು ಊಹಿಸಿಕೊಳ್ಳಲು ಆಗುವುದಿಲ್ಲ. ಜಿಲ್ಲಾ ರಕ್ಷಣಾಧಿಕಾರಿಗಳು ಈ ಬಗ್ಗೆ ಕೇಳಿದರೆ ಬೇಜವಬ್ದಾರಿ ಉತ್ತರ ಕೊಡುತ್ತಾರೆ. ಶಿವಮೊಗ್ಗ ನಗರದಲ್ಲಿ ಶಾಂತಿಸುವ್ಯವಸ್ಥೆ ಇಲ್ಲವಾಗಿದೆ. ಈ ಘಟನೆಗೆ ಸಂಬಂಧಪಟ್ಟಂತೆ ಕೋಟೆ ಪೊಲೀಸ್ ಸ್ಟೇಷನ್ ಎಸ್.ಐ.ನ್ನು ಕೂಡಲೇ ವರ್ಗಾವಣೆ ಮಾಡಬೇಕು. ಅವರ ವಿರುದ್ಧ ಕ್ರಮಕೈಗೊಳ್ಳಬೇಕು. ಹಾಗೆಯೇ ಶಾಂತಿ ಕಾಪಾಡಲು ಆಗದ ಜಿಲ್ಲಾರಕ್ಷಣಾಧಿಕಾರಿಗಳು ನಮ್ಮ ಜಿಲ್ಲೆಯಲ್ಲಿ ಇದ್ದರೆಷ್ಟು ಹೋದರೆಷ್ಟು ಕೂಡಲೇ ಅವರು ಜಾಗ ಖಾಲಿ ಮಾಡಲಿ ಎಂದರು.

ಇಂತಹ ಘಟನೆಗಳು ಮರುಕಳಿಸಿದರೆ ಬಿಜೆಪಿ ಜನಾಂಧೋಲನವನ್ನು ಮಾಡಬೇಕಾದ ಅವಶ್ಯಕತೆ ಬರುತ್ತದೆ. ಹಿಂದುಗಳನ್ನು ಗಡಿಪಾರು ಮಾಡುವ ಪೊಲೀಸರು ತಲ್ವಾರನ್ನು ಝಳಪಿಸುವವರನ್ನು ಸುಮ್ಮನೆ ಬಿಡುತ್ತಾರೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಟಿ.ಡಿ.ಮೇಘರಾಜ್, ರುದ್ರೇಗೌಡರು, ಅರುಣ್ ಡಿ.ಎಸ್., ನಾಗರಾಜ್, ಮೋಹನ್‌ರೆಡ್ಡಿ, ಚಂದ್ರಶೇಖರ್, ಅಣ್ಣಪ್ಪ ಕೆ.ವಿ., ಮುಂತಾದವರಿದ್ದರು.

Leave a Comment

error: Content is protected !!