ಮೇ 12 ರಿಂದ ರಾಜ್ಯದಲ್ಲಿ ಭಾರಿ ಮಳೆ ಸಾಧ್ಯತೆ

Written by Malnadtimes.in

Published on:

WhatsApp Group Join Now
Telegram Group Join Now

ಬೆಂಗಳೂರು : ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮೇ 11ರವರೆಗೆ ಸಾಧಾರಣ ಮಳೆಯಾದರೆ, ಮೇ 12ರ ಬಳಿಕ ಭಾರಿ ಮಳೆಯಾಗುವ (Heavy Rain) ಲಕ್ಷಣ ಗೋಚರಿಸಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮೇ 10ರಂದು ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.

ಬಾಗಲಕೋಟೆ, ಬೆಳಗಾವಿ, ಬೀದರ್‌, ಧಾರವಾಡ, ಗದಗ, ಹಾವೇರಿ, ಕಲಬುರಗಿ, ವಿಜಯಪುರ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಾಮರಾಜನಗರದ ಕೆಲವೆಡೆ ಗುಡುಗು ಸಹಿತ ಮಳೆಯಾಗಲಿದೆ.

ಚಿಕ್ಕಮಗಳೂರು, ಹಾಸನ, ದಾವಣಗೆರೆ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಮತ್ತು ವಿಜಯನಗರ, ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಮೇ 11ರ ವರೆಗೆ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಹಗುರ ಮಳೆಯಾಗಲಿದೆ. ಮೇ 12 ರಿಂದ 15ರ ವರೆಗೆ ಕರ್ನಾಟಕದ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಮೇತ ಮಳೆಯಾಗುವ ಹೆಚ್ಚಿನ ಸಾಧ್ಯತೆಗಳಿವೆ.

ಬೆಂಗಳೂರಿನಲ್ಲಿ ಮುಂದಿನ 4 ದಿನಗಳ ವರೆಗೆ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆಗಳಿವೆ ಎಂದು ಭಾರತೀಯ ಹವಾಮಾನ ಇಲಾಖೆಯ ತಜ್ಞ ಸಿ.ಎಸ್‌.ಪಾಟೀಲ್‌ ತಿಳಿಸಿದ್ದಾರೆ.

Leave a Comment

error: Content is protected !!