Rain Alert | ಇನ್ನೊಂದು ವಾರ ಭಾರಿ ಮಳೆ ಸಾಧ್ಯತೆ, ಆರೆಂಜ್ ಅಲರ್ಟ್ ಘೋಷಣೆ

Written by Malnadtimes.in

Updated on:

WhatsApp Group Join Now
Telegram Group Join Now

ಬೆಂಗಳೂರು : ಇನ್ನೊಂದು ವಾರ ರಾಜ್ಯದಲ್ಲಿ ಭಾರಿ ಮಳೆಯಾಗುವ (Heavy Rain) ಸಾಧ್ಯತೆ ಇದ್ದು ಕೆಲವು ಕಡೆಗಳಲ್ಲಿ ಬಿರುಗಾಳಿ ಹಾಗೂ ಗುಡುಗು ಸಹಿತ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ (Meteorological Department) ಮುನ್ಸೂಚನೆ ನೀಡಿದೆ.

ಬೆಂಗಳೂರಿನ ಕೆಲವು ಕಡೆ ಎರಡು ದಿನ ಮೋಡ ಕವಿದ ವಾತಾವರಣ ಇರಲಿದ್ದು, ಸಾಧಾರಣದಿಂದ ಜೋರು ಮಳೆಯಾಗುವ ಸಂಭವ ಇದೆ.

ಹಾಸನ, ಮಂಡ್ಯ, ದಕ್ಷಿಣ ಕನ್ನಡ, ಕೊಡಗು, ಮೈಸೂರು, ತುಮಕೂರು ಜಿಲ್ಲೆಗಳಿಗೆ ಶುಕ್ರವಾರ ಯೆಲ್ಲೋ ಅಲರ್ಟ್ ನೀಡಲಾಗಿದೆ. ಬಳ್ಳಾರಿ ದಾವಣಗೆರೆ ಚಿತ್ರದುರ್ಗ ಜಿಲ್ಲೆಯ ಕೆಲವು ಕಡೆ 40 ರಿಂದ 50 ಕಿಲೋ ಮೀಟರ್ ವೇಗದಲ್ಲಿ ಗಾಳಿ ಸಹಿತ ಭಾರಿ ಮಳೆಯಾಗುವ ಸಂಭವವಿದೆ.

ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಶನಿವಾರ ಮಳೆಯ ತೀವ್ರತೆ ಹೆಚ್ಚಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.

ಬೆಂಗಳೂರು, ಬೆಂ. ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೊಡಗು, ದಕ್ಷಿಣ ಕನ್ನಡದಲ್ಲಿ ಮೇ 19ರಿಂದ ಎರಡು ದಿನ ಹಾಗೂ ಮಂಡ್ಯ, ತುಮಕೂರು, ಉಡುಪಿಯಲ್ಲಿ ಮೇ 20ರಂದು ಭಾರಿ ಮಳೆ ಬೀಳುವ ಸಾಧ್ಯತೆ ಇರುವುದರಿಂದ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ ಸೇರಿದಂತೆ 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಮೇ 20ರವರೆಗೆ ಕೆಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Leave a Comment

error: Content is protected !!