Rain Alert | ಶಿವಮೊಗ್ಗ, ಚಿಕ್ಕಮಗಳೂರು ಸೇರಿದಂತೆ 8 ಜಿಲ್ಲೆಗಳಲ್ಲಿ ಇಂದು ಭಾರಿ ಮಳೆ ಸಾಧ್ಯತೆ, ಆರೆಂಜ್ ಅಲರ್ಟ್ ಘೋಷಣೆ

Written by Malnadtimes.in

Updated on:

WhatsApp Group Join Now
Telegram Group Join Now

Rain Alert ಬೆಂಗಳೂರು : ರಾಜ್ಯದಲ್ಲಿ ಕಳೆದೊಂದು ವಾರದಿಂದ ಮಳೆಯಾರ್ಭಟ (Rain) ಜೋರಾಗಿದ್ದು ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ (Shivamogga) ಮತ್ತು ಚಿಕ್ಕಮಗಳೂರು (Chikkamagaluru) ಸೇರಿದಂತೆ ರಾಜ್ಯದ 8 ಜಿಲ್ಲೆಗಳಿಗೆ ಹವಾಮಾನ ಇಲಾಖೆಯು ಆರೆಂಜ್‌ ಅಲರ್ಟ್‌ ಘೋಷಿಸಿದೆ.

Rain Alert

ದಕ್ಷಿಣ ತಮಿಳುನಾಡಿನಲ್ಲಿ 1.5 ಮತ್ತು 4.5 ಕಿ.ಮೀ. ಅಂತರದಲ್ಲಿ ಸರ್ಕ್ಯೂಲೇಶನ್‌ ಇರುವ ಹಿನ್ನೆಲೆಯಲ್ಲಿ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮೇ 18ರಿಂದ ಮೇ 21ರವರೆಗೆ ಮಳೆಯಾಗಲಿದೆ.

ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಈ ಜಿಲ್ಲೆಗಳಿಗೆ ಮೇ 18 ರಿಂದ 21ರ ವರೆಗೆ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ತಜ್ಞ ಸಿ.ಎಸ್‌.ಪಾಟೀಲ್‌ ತಿಳಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಗೆ ಹಳದಿ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಇಂದು ಎಲ್ಲೆಲ್ಲಿ ಮಳೆ ?

ಇಂದು ಉತ್ತರ ಕನ್ನಡ, ತುಮಕೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಹೆಚ್ಚಿನ ಕಡೆಗಳಲ್ಲಿ ಭಾರಿ ಗಾಳಿಯೊಂದಿಗೆ (40-50 ಕಿ.ಮೀ) ಗುಡುಗು ಸಹಿತ ಧಾರಾಕಾರವಾಗಿ ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಕನ್ನಡ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ತುಮಕೂರು, ವಿಜಯನಗರ, ಬಾಗಲಕೋಟೆ, ಬೆಳಗಾವಿ, ಬೀದರ್‌, ಧಾರವಾಡದ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳ ಅನೇಕ ಕಡೆಗಳಲ್ಲಿ ಬಿರುಗಾಳಿ ಸಹಿತ (40-50 ಕಿ‌.ಮೀ. ವೇಗ) ಹಗುರದಿಂದ ಜೋರು ಮಳೆಯಾಗುವ ಸಾಧ್ಯತೆಯಿದೆ.

Read More:ಆಯನೂರು ಮಂಜುನಾಥ್ ಗೆಲುವಿಗೆ ಒಗ್ಗಟ್ಟಾಗಿ ಶ್ರಮಿಸೋಣ ; ಬೇಳೂರು ಗೋಪಾಲಕೃಷ್ಣ

Leave a Comment

error: Content is protected !!