ಇನ್ನೂ ಮೂರು ದಿನ ಮಳೆಯಾಗುವ ಮುನ್ಸೂಚನೆ

Written by Malnadtimes.in

Published on:

WhatsApp Group Join Now
Telegram Group Join Now

ಬೆಂಗಳೂರು : ರಾಜ್ಯದ ದಕ್ಷಿಣ ಒಳನಾಡು ಮತ್ತು ಕರಾವಳಿ (Karavali) ಜಿಲ್ಲೆಯ ಹಲವು ಕಡೆ ಮುಂದಿನ ಮೂರು ದಿನ ವ್ಯಾಪಕ ಮಳೆಯಾಗುವ (Heavy Rain) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Meteorological Department) ಮುನ್ಸೂಚನೆ ನೀಡಿದೆ.

ಗುರುವಾರ ಉಡುಪಿ (Udupi), ಉತ್ತರ ಕನ್ನಡ (Utthara Kannada) ಜಿಲ್ಲೆಗಳಲ್ಲಿ ಬಹುತೇಕ ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ನೀಡಿದೆ.

ಇನ್ನು ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ, ಜಿಲ್ಲೆಗಳಲ್ಲಿ ಕೂಡ ಗುರುವಾರ ಹಲವೆಡೆ ಗುಡುಗು, ಬಿರುಗಾಳಿ ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ವಿಜಯಪುರ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಬಳ್ಳಾರಿ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಹಲವೆಡೆ ಗುಡುಗು ಸಹಿತ ಗಾಳಿಯೊಂದಿಗೆ ಹಗುರ ಮಳೆಯಾಗುವ ಸಾಧ್ಯತೆಯಿದೆ.

ಬೀದರ್, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ ಹಗುರ ಮಳೆಯಾಗುವ ಸಾಧ್ಯತೆಯಿದೆ ಎಂದು ಮಾಹಿತಿ ನೀಡಿದೆ.

Leave a Comment

error: Content is protected !!