ತೀರ್ಥಹಳ್ಳಿ : ತಾಲ್ಲೂಕಿನ ಮಾಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತೆಗೆ ಕಿರುಕುಳ ನೀಡಿರುವ ಹಿನ್ನಲೆಯಲ್ಲಿ ಅನ್ಯಕೋಮಿನ ಯುವಕನನ್ನು ಪೋಕ್ಸೋ (Pocso) ಕಾಯ್ದೆಯಡಿ ಬಂಧಿಸಿರುವ ಘಟನೆ ವರದಿಯಾಗಿದೆ.
ಯುವತಿಗೆ ಚುಡಾಯಿಸಿದ್ದಲ್ಲದೇ ಆಕೆಯ ಹಿಂದೆ ಸುತ್ತುತ್ತಿದ್ದ ಎಂಬ ದೂರಿನ ಆಧಾರದ ಮೇಲೆ ಮಾಳೂರು ಪೊಲೀಸರು ನೊಂದ ಯುವತಿಯ ಹೇಳಿಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳ ಸಮ್ಮುಖದಲ್ಲಿ ನ್ಯಾಯಾಧೀಶರ ಮುಂದೆ ಹಾಜರಾಗಿ ಯುವತಿ ಹೇಳಿಕೆ ನೀಡಿರುವುದಾಗಿ ತಿಳಿದು ಬಂದಿದೆ.