ಜಾನುವಾರು ಮೇಯಿಸಲು ಹೋದ ಬಾಲಕ ಕೃಷಿ ಹೊಂಡಕ್ಕೆ ಬಿದ್ದು ಸಾವು !

Written by Malnadtimes.in

Published on:

WhatsApp Group Join Now
Telegram Group Join Now

ಸೊರಬ: ಜಾನುವಾರು ಮೇಯಿಸಲು ಹೋದ ಬಾಲಕನೋರ್ವ ಕೃಷಿ ಹೊಂಡಕ್ಕೆ ಬಿದ್ದು ಮೃತಪಟ್ಟ ಘಟನೆ ತಾಲೂಕಿನ ಕ್ಯಾಸನೂರು – ತಲಕಾಲಕೊಪ್ಪ ಗ್ರಾಮದಲ್ಲಿ ಸೋಮವಾರ ನಡೆದಿದೆ.

ಸುರೇಶ್ ಎಂಬುವವರ ಪುತ್ರ ಸಾತ್ವಿಕ್ (14) ಮೃತ ದುರ್ದೈವಿ. ಸಾತ್ವಿಕ್ ಶಾಲೆ ರಜೆ ಇರುವ ಹಿನ್ನೆಲೆ ಜಾನುವಾರು ಮೇಯಿಸಲು ತೆರಳಿದಾಗ ಗ್ರಾಮದ ಫಾತೀಮ ಎಂಬುವರ ಕೃಷಿ ಹೊಂಡಕ್ಕೆ ಆಕಸ್ಮಿಕವಾಗಿ ಕಾಲುಜಾರಿ ಬಿದ್ದು ಮೃತಪಟ್ಟಿದ್ದಾನೆ. ಘಟನಾ ಸ್ಥಳದಲ್ಲಿ ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು.

ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬಾಲಕನ ಶವ ಮೇಲೆತ್ತಿದ್ದಾರೆ. ಈ ಘಟನೆ ಸಂಬಂಧ ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment

error: Content is protected !!