ಉತ್ತಮ ಫಲಿತಾಂಶ ತಂದಾಗ ಮಾತ್ರ ದಾನಿಗಳಿಗೆ ಸಾರ್ಥಕತೆ ಎಂದೆನಿಸುವುದು ; ಮಾಸ್ತಿಕಟ್ಟೆ ಸುಬ್ರಮಣ್ಯ

Written by Malnadtimes.in

Published on:

WhatsApp Group Join Now
Telegram Group Join Now

HOSANAGARA | ಗ್ರಾಮೀಣ ಪ್ರದೇಶದ ಮಕ್ಕಳ ಉಜ್ವಲ ಭವಿಷ್ಯ ರೂಪಿಸಲು ಅನೇಕ ಸಂಘ-ಸಂಸ್ಥೆಗಳು ಉಚಿತ ಪಠ್ಯಪುಸ್ತಕಗಳ ವಿತರಿಸುತ್ತಿದ್ದು, ಇದನ್ನರಿತು ವಿದ್ಯಾರ್ಥಿಗಳು ಉತ್ತಮ ಶಿಕ್ಷಣವನ್ನು ಪಡೆದು ಶಿಕ್ಷಣ ನೀಡಿದ ಶಾಲೆಗೆ ಉತ್ತಮ ಫಲಿತಾಂಶ ತಂದಾಗ ಮಾತ್ರ ದಾನಿಗಳಿಗೆ ಸಾರ್ಥಕತೆ ಎಂದೆನಿಸುವುದು ಎಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಾಸ್ತಿಕಟ್ಟೆ ಸುಬ್ರಮಣ್ಯ ತಿಳಿಸಿದರು.

ತಾಲ್ಲೂಕಿನ ಜೇನಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಸಗಲ್ಲಿ ಸರ್ಕಾರಿ ಪ್ರೌಢಶಾಲೆಯಲ್ಲಿ ಸಾಗರ-ಹೊಸನಗರ ಕ್ಷೇತ್ರದ ಶಾಸಕರು ಮತ್ತು ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಗೋಪಾಲಕೃಷ್ಣ ಬೇಳೂರು ಹಾಗೂ ನೀಡ್ ಬೇಸ್ ಇಂಡಿಯಾ ಸಂಸ್ಥೆಯ ಸಹಕಾರದೊಂದಿಗೆ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್ ವಿತರಿಸಿ ಮಾತನಾಡಿದ ಅವರು, ಆಧುನಿಕ ಯುಗದಲ್ಲಿ ಶಿಕ್ಷಣವು ವಿದ್ಯಾರ್ಥಿಗಳಿಗೆ ಉತ್ತಮ ಬುನಾದಿಯಾಗಿದ್ದು, ಗ್ರಾಮೀಣ ಮಟ್ಟದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ದೊರಕಿಸುವ ಸಲುವಾಗಿ ಸರ್ಕಾರ ಮತ್ತು ವಿವಿಧ ಸಂಘ-ಸಂಸ್ಥೆಗಳು ಹೆಚ್ಚು ಹೆಚ್ಚು ಪ್ರೋತ್ಸಾಹಿಸುತ್ತಿದ್ದು, ಇದನ್ನು ‌ಮನಗಂಡು ವಿದ್ಯಾರ್ಥಿಗಳು ಶ್ರದ್ಧೆಯಿಂದ ವಿದ್ಯಾಭ್ಯಾಸ ಮಾಡಿ ಹೆಚ್ಚಿನ ಅಂಕ ತೆಗೆದುಕೊಂಡು ಉತ್ತಮ ಫಲಿತಾಂಶ ಪಡೆದು ಶಾಲೆಗೂ ಪೋಷಕರಿಗೂ ಹಾಗೂ ದಾನಿಗಳಿಗೂ ಕೀರ್ತಿ ತಂದಾಗ ಮಾತ್ರ ಸಾರ್ಥಕತೆಯ ಬದುಕು ಸಾಗಿಸಲು ಸಾಧ್ಯ ‌ಎಂದರು.

ತಾಲ್ಲೂಕಿನಲ್ಲಿ ಸರ್ಕಾರಿ ಶಾಲೆಗಳಲ್ಲಿ ಶೇ. 100 ಫಲಿತಾಂಶವನ್ನು ಪಡೆಯಲಾಗುತ್ತಿದ್ದು ಕಳೆದ ವರ್ಷ ಇದೇ ಶಾಲೆಯಲ್ಲಿ 25 ವಿದ್ಯಾರ್ಥಿಗಳಲ್ಲಿ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಫಲಿತಾಂಶದೊಂದಿಗೆ ತೇರ್ಗಡೆಯಾದರು ಇದನ್ನರಿತ ಶಾಸಕರು ನೀಡ್ ಬೇಸ್ ಇಂಡಿಯಾ ಸಂಸ್ಥೆಯನ್ನು ಸಂಪರ್ಕಿಸಿದ ಫಲವಾಗಿ ಬಡವರ ಕೂಲಿ ಕಾರ್ಮಿಕರ ಮಕ್ಕಳಿಗೆ ನೋಟ್ ಪುಸ್ತಕ ವಿತರಣೆ ಮಾಡಲಾಗುತ್ತಿದೆ. ಕಳೆದ ಬಾರಿಯಂತೆಯೇ ಈ ಬಾರಿಯು ಉತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗಿ ಮುಂದಿನ ದಿನಗಳಲ್ಲಿ ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳುವಂತೆ ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರಾದ ಮಾಧವ ಶೆಟ್ಟಿ ಜಂಬಳ್ಳಿ, ಉದಯ್.ಕೆ.ಗೌಡ, ನಾಸಿರ್ ಹೊಸನಗರ, ಚೇತನ್ ದಾಸ್ ಹೊಸಮನೆ ಮತ್ತು ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

Leave a Comment

error: Content is protected !!