CHIKKAMAGALURU |  ಕಾಫಿನಾಡಿನ 6 ತಾಲೂಕಿನ ಶಾಲೆಗಳಿಗೆ ಮಂಗಳವಾರ ರಜೆ

Written by Malnadtimes.in

Published on:

WhatsApp Group Join Now
Telegram Group Join Now

CHIKKAMAGALURU | ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆರಾಯ ಅಬ್ಬರಿಸಿ ಬೊಬ್ಬಿರಿಯುತ್ತಿದ್ದಾನೆ. ಈ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತೆಯ ಹಿತದೃಷ್ಟಿಯಿಂದ ಜಿಲ್ಲಾಡಳಿತ ಪ್ರಾಥಮಿಕ ಮತ್ತು ಪ್ರೌಡಶಾಲೆಗಳಿಗೆ ಜು.16 ಮಂಗಳವಾರ ರಜೆ ಘೋಷಣೆ ಮಾಡಿದೆ.

ಜಿಲ್ಲೆಯ 6 ತಾಲೂಕುಗಳಾದ ಚಿಕ್ಕಮಗಳೂರು, ಕಳಸ, ಶೃಂಗೇರಿ, ಕೊಪ್ಪ, ಎನ್.ಆ‌ರ್.ಪುರ ಮತ್ತು ಮೂಡಿಗೆರೆ ತಾಲೂಕಿನ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಜುಲೈ 16ರಂದು ಒಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಮೀನಾ ನಾಗರಾಜ್‌ ಆದೇಶಿಸಿದ್ದಾರೆ.

ಇನ್ನೂ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯಲ್ಲಿ ನಾಳೆಯೂ ಭಾರಿ ಮಳೆಯಾಗುವ‌ ಸಾಧ್ಯತೆ ಇರುವುದರಿಂದ ಜು.16ರಂದು ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಶಿವಮೊಗ್ಗ ಜಿಲ್ಲಾದ್ಯಂತ ಸಹ ಮಂಗಳವಾರ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶಿಸಿದ್ದಾರೆ.

Leave a Comment

error: Content is protected !!