ಕೃಷಿಭಾಗ್ಯ ಯೋಜನೆಯಡಿ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

Written by Malnadtimes.in

Published on:

WhatsApp Group Join Now
Telegram Group Join Now

SHIVAMOGGA | ಕೃಷಿ ಇಲಾಖೆಯು ಮಳೆ ನೀರನ್ನು ಸಂಗ್ರಹಿಸಿ ಕೃಷಿಯಲ್ಲಿ ಸದ್ಬಳಕೆ ಮಾಡಲು ರೈತರನ್ನು ಉತ್ತೇಜಿಸುವ ಸಲುವಾಗಿ ಕರ್ನಾಟಕ ಸರ್ಕಾರವು ಕೃಷಿಭಾಗ್ಯ ಯೋಜನೆಯನ್ನು ಜಾರಿಗೆ ತಂದಿದ್ದು, ಈ ಯೋಜನೆಯಡಿ ವಿವಿದ ಸೌಲಭ್ಯಗಳನ್ನು ಪಡೆದುಕೊಳ್ಳಲು ರೈತರಿಂದ ಅರ್ಜಿಗಳನ್ನು ಆಹ್ವಾನಿಸಿದೆ.

ಕೃಷಿಭಾಗ್ಯ ಯೋಜನೆಯು ಪ್ಯಾಕೇಜ್ ಮಾದರಿಯಲ್ಲಿ ಅನುಷ್ಟಾನಗೊಳ್ಳುತ್ತಿದ್ದು, ಬದು, ಕೃಷಿ ಹೊಂಡ, ಕೃಷಿ ಹೊಂಡದ ಸುತ್ತ ತಂತಿ ಬೇಲಿ, ಕೃಷಿ ಹೊಂಡಕ್ಕೆ ಪಾಲೀಥಿನ್ ಹೊದಿಕೆ, ಪಂಪ್ ಸೆಟ್ ಹಾಗೂ ಲಘು ನೀರಾವರಿ ಘಟಕಗಳನ್ನು ಅನುಷ್ಠಾನ ಮಾಡಲು ಸಹಾಯಧನ ನೀಡಲಾಗುತ್ತಿದೆ.

ರೈತ ಮಂಜುನಾಥ್, ಚನ್ನಹಳ್ಳಿ, ಆಯನೂರು ಇವರು 2018 ರಲ್ಲಿ ಕೃಷಿ ಭಾಗ್ಯ ಯೋಜನೆಯಡಿಯಲ್ಲಿ ನಿರ್ಮಾಣ ಮಾಡಿಕೊಂಡ ಕೃಷಿಹೊಂಡ.

ರೈತರು ಈ ಎಲ್ಲಾ ಘಟಕಗಳನ್ನು ಕಡ್ಡಾಯವಾಗಿ ಅನುಷ್ಠಾನ ಮಾಡಬೇಕಾಗಿರುತ್ತದೆ. ಸಾಮಾನ್ಯ ವರ್ಗದ ರೈತರಿಗೆ ಶೇ. 80 ರಷ್ಟು ಹಾಗೂ ಪರಿಶಿಷ್ಟ ಜಾತಿ ಮತ್ತು ಪಂಗಡದ ರೈತರಿಗೆ ಶೇ. 90% ಸಹಾಯಧನ ನೀಡಲು ಅವಕಾಶವಿರುತ್ತದೆ.
ಆಸಕ್ತ ರೈತರು ರೈತ ಸಂಪರ್ಕ ಕೇಂದ್ರಗಳಲ್ಲಿ ಅರ್ಜಿಯನ್ನು ಪಡೆದುಕೊಂಡು, ಭರ್ತಿ ಮಾಡಿದ ಅರ್ಜಿಯೊಂದಿಗೆ ಪಾಸ್‌ಪೋರ್ಟ್ ಸೈಜ್ ಫೋಟೊ, ಪಹಣಿ, ಜಾತಿ ಪ್ರಮಾಣ ಪತ್ರ ಬ್ಯಾಂಕ್ ಪಾಸ್ ಪುಸ್ತಕದ ಪ್ರತಿ ಸೇರಿದಂತೆ ಅಗತ್ಯ ದಾಖಲಾತಿಗಳನ್ನು ಲಗತ್ತಿಸಿ ರೈತ ಸಂಪರ್ಕ ಕೇಂದ್ರಗಳಲ್ಲಿ ಅರ್ಜಿಯನ್ನು ಸಲ್ಲಿಸುವಂತೆ ಸಹಾಯಕ ಕೃಷಿ ನಿರ್ದೇಶಕ ರಮೇಶ್,ಎಸ್,ಟಿ.ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Comment

error: Content is protected !!