ಹೊಸನಗರದಲ್ಲಿ 78ನೇ ಸ್ವಾತಂತ್ರ್ಯೋತ್ಸವ ಆಚರಣೆ | ಮಹತ್ವರ ತ್ಯಾಗ ಬಲಿದಾನದಿಂದ ನಮಗೆ ಸ್ವಾತಂತ್ರ್ಯ ಸಿಕ್ಕಿದ್ದು ನೆಮ್ಮದಿಯಿಂದ ಬದುಕಲು ಸಾಧ್ಯವಾಗಿದೆ ; ತಹಶೀಲ್ದಾರ್ ರಶ್ಮಿ ಹಾಲೇಶ್

Written by Malnadtimes.in

Published on:

WhatsApp Group Join Now
Telegram Group Join Now

HOSANAGARA | ಬಹಳ ವರ್ಷಗಳ ಹೋರಾಟ, ತ್ಯಾಗ ಮತ್ತು ನಿರ್ಣಯದ ನಂತರ ಭಾರತವು ಅಂತಿಮವಾಗಿ ಬ್ರಿಟಿಷ್ ವಸಾಹತುಶಾಹಿ ಆಡಳಿತದ ಹಿಡಿತದಿಂದ ಹೊರಬಂದ ದಿನವನ್ನು ಇಂದು ನೆನಪಿಸುತ್ತದೆ ಎಂದು ಹೊಸನಗರದ ತಹಶೀಲ್ದಾರ್ ರಶ್ಮಿ ಹಾಲೇಶ್‌ ಹೇಳಿದರು.

ಪಟ್ಟಣದ ನೆಹರು ಮೈದಾನದ ಆವರಣದಲ್ಲಿ ವಿವಿಧ ಶಾಲೆಯ ವಿದ್ಯಾರ್ಥಿಗಳಿಂದ ವಂದನೆ ಸ್ವೀಕರಿಸಿ 78ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಿ ಮಾತನಾಡಿದ ಅವರು, ಈ ಸ್ವಾತಂತ್ರ್ಯ ದಿನದಂದು ತಮ್ಮ ಪ್ರಾಣ ಅರ್ಪಿಸಿದವರಿಗೆ ಉತ್ತಮ ಭವಿಷ್ಯಕ್ಕಾಗಿ ಶ್ರಮಿಸಿದಂತಹ ಮಹಾತ್ಮ ಗಾಂಧೀಜಿ, ಭಗತ್ ಸಿಂಗ್, ಸುಭಾಷ್ ಚಂದ್ರ ಭೋಸ್, ಸರೋಜಿನಿ ನಾಯ್ಡು, ತಿಲಕ್ ಡಾ|| ರಾಜೇಂದ್ರ ಪ್ರಸಾದ್, ಸರ್ದಾರ್ ವಲ್ಲಬಾಯಿ ಪಟೇಲ್, ಲಾಲ್ ಬಹುದ್ದೂರು ಶಾಸ್ತ್ರಿ, ಡಾ|| ಬಿ.ಆರ್ ಅಂಬೇಡ್ಕರ್ ಆದಿಯಾಗಿ ಎಲ್ಲರಿಗೂ ಸಮರ್ಪಿಣೆ ಅರ್ಪಿಸುವುದು ನಮ್ಮ ನಿಮ್ಮೆಲ್ಲರ ಕರ್ತವ್ಯ ನಾವೆಲ್ಲರೂ ಶ್ರೇಷ್ಠ ಪ್ರಜಾಪ್ರಭುತ್ವದ ಭಾಗಿಯಾಗಿದ್ದೇವೆ. ಭಾರತ ದೇಶದ ಪ್ರಜೆಗಳಾದ ನಮಗೆ ನಮ್ಮೆಲ್ಲರಿಗೂ ಹಲವಾರು ಗುರುತುಗಳಿವೆ ಅಂದರೆ ಜಾತಿ ಧರ್ಮ, ಭಾಷೆ ಹಾಗೂ ನಾವು ವಾಸಿಸುವ ಪ್ರದೇಶಗಳು ಇವುಗಳನ್ನು ನಾವು ನಮ್ಮ ಕುಟುಂಬಗಳು-ವೃತ್ತಿಗಳೊಂದಿಗೆ ಗುರುತಿಸಿಕೊಳ್ಳುತೇವೆ. ಆದರೆ ಅದೆಲ್ಲಕ್ಕಿಂತ ಮಿಗಿಲಾಗಿ ನಮಗೆ ಒಂದು ಗುರುತು ಇದೆ ಅದೇ ನಾವು ಬಾರತೀಯರು ಎಂಬ ಹೆಗ್ಗಳಿಕೆ ಎಂದರು.

ಎಲ್ಲಿಯವರೆಗೆ ಪ್ರಜೆಗಳಿಗೆ ಸ್ವಾತಂತ್ರ್ಯ ಇರುತ್ತದೂ ಯಾವ ದೇಶದ ಪ್ರಜೆಗಳು ಸ್ವಾತಂತ್ರ್ಯರಾಗಿರುತ್ತಾರೂ ಅಲ್ಲಿಯವರೆಗೆ ದೇಶದ ಅಭಿವೃದ್ಧಿ, ಪ್ರಜೆಗಳ ಅಭಿವೃದ್ಧಿ, ನಾಡಿನ ಅಭಿವೃದ್ಧಿ ಒಂದು ಕುಟುಂಬದ ಅಭಿವೃದ್ಧಿ ನಿರಂತರವಾಗಿ ಸಾಗುತ್ತಿರುತ್ತದೆ. ಇದಕ್ಕೆ ಇಂದಿನ ಭಾರತವೇ ಸಾಕ್ಷಿ ಇಡೀ ಪ್ರಪಂಚದಲ್ಲಿ ನಮ್ಮ ಪ್ರಜಾಪ್ರಭುತ್ವ ವ್ಯವಸ್ಥೆಯ ಜೊತೆಗೆ ನಮ್ಮ ದೇಶದಲ್ಲಿ ಎಲ್ಲ ಜಾತಿ ಧರ್ಮದವರು ಇದ್ದು ಎಲ್ಲರೂ ನಾವೆಲ್ಲರೂ ಭಾರತೀಯರು ಎಂದು ಹೆಮ್ಮೆಯಿಂದ ಹೇಳಿಕೊಳ್ಳುತ್ತಿದ್ದೇವೆ ಎಂದರು.

78ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಕಾರ್ಯನಿರ್ವಹಣಾಧಿಕಾರಿ ನರೇಂದ್ರಕುಮಾರ್, ಸರ್ಕಲ್ ಇನ್ಸ್‌ಪೆಕ್ಟರ್ ಗುರಣ್ಣ ಎಸ್ ಹೆಬ್ಬಾಳ್, ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ಉಮೇಶ್ ಎಸ್ ಗುಡ್ಡದ್, ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣಮೂರ್ತಿ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಸವಣ್ಯಪ್ಪ, ಸಬ್ ಇನ್ಸ್‌ಪೆಕ್ಟರ್ ಶಂಕರ ಗೌಡ ಪಾಟೀಲ್, ದೀಪಕ್ ಸ್ವರೂಪ್, ದೈಹಿಕ ಪರೀವಿಕ್ಷಕರಾದ ಬಾಲಚಂದ್ರರಾವ್, ನಾಡ ಹಬ್ಬಗಳ ಸಮಿತಿಯ ಸದಸ್ಯರಾದ ಎನ್ ಶ್ರೀಧರ ಉಡುಪ, ಶ್ರೀನಿವಾಸ್ ಕಾಮತ್, ರಾಜಮೂರ್ತಿ, ಶಿಕ್ಷಕರಾದ ಕಮಲಾಕರ, ಧನಂಜಯ, ಸುಹಾಸ್, ವರ್ತಕರ ಸಂಘದ ಅಧ್ಯಕ್ಷ ವಿಜೇಂದ್ರ ಶೇಟ್, ಪಟ್ಟಣ ಪಂಚಾಯತಿ ಸದಸ್ಯರುಗಳು ತಾಲ್ಲೂಕು ಕಛೇರಿಯ ಸಿಬ್ಬಂದಿಗಳಾದ ಮಂಜುನಾಥ್ ಕಟ್ಟೆ ಚಿರಾಗ್, ರೇಣುಕಯ್ಯ, ಕೌಶಿಕ್, ಬಾಲಚಂದ್ರ ಹೊಸನಗರದ ಎಲ್ಲ ಸರ್ಕಾರಿ ಅಧಿಕಾರಿಗಳು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿಯಲ್ಲಿ ತಾಲ್ಲೂಕಿನಲ್ಲಿ ಹೆಚ್ಚು ಅಂಕ ಪಡೆದಿರುವ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ವಿದ್ಯಾರ್ಥಿಗಳಿಂದ ದೇಶ ಭಕ್ತಿಗೀತೆಗಳನ್ನು ಹಾಡುವುದರ ಮೂಲಕ ವಿವಿಧ ಸಾಂಸ್ಕೃತಿಕ ಮನರಂಜನೆ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿತ್ತು.

Leave a Comment

error: Content is protected !!