ಹೊಸನಗರ ತೋಟಗಾರಿಕೆ ಇಲಾಖೆಯಲ್ಲಿ 2024-25ನೇ ಸಾಲಿನಲ್ಲಿ ವಿವಿಧ ಯೋಜನೆಗಳಡಿ ಸಹಾಯಧನ ಪಡೆಯಲು ಅರ್ಜಿ ಆಹ್ವಾನ

Written by Malnadtimes.in

Published on:

WhatsApp Group Join Now
Telegram Group Join Now

HOSANAGARA | 2024-25ನೇ ಸಾಲಿನಲ್ಲಿ ಹೊಸನಗರ ತೋಟಗಾರಿಕೆ ಇಲಾಖೆಯಿಂದ ಹನಿ ನೀರಾವರಿ ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ (SC), ಪರಿಶಿಷ್ಟ ಪಂಗಡ (ST)ದ ತೋಟಗಾರಿಕೆ ಬೆಳೆಯಾದ ಅಡಿಕೆ ತೋಟ ಹೊಂದಿರುವ ರೈತರಿಗೆ ಶೇ. 90ರ ಸಹಾಯಧನದಲ್ಲಿ ಹನಿ ನೀರಾವರಿ ಅಳವಡಿಸಿಕೊಳ್ಳಲು ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಇನ್ನೂ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿಯಲಿ, ಪರಿಶಿಷ್ಟ ಪಂಗಡದ (ST) ರೈತರಿಗೆ ಅಡಿಕೆ ತೋಟದಲ್ಲಿ ಕಾಳುಮೆಣಸು ಮಿಶ್ರ ಬೆಳೆಯಾಗಿ ಬೆಳೆಯಲು ಉತ್ತೇಜಿಸುವ ಸಲುವಾಗಿ ಪುನಶ್ಚೇತನ ಕಾರ್ಯಕ್ರಮ ಹಾಗೂ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ರೈತ ಫಲಾನುಭವಿಗಳಿಗೆ ಕನಿಷ್ಠ 1 ಎಕರೆ ಹೊಂದಿರುವ ರೈತರಿಗೆ 20 HP ಗಿಂತ ಕಡಿಮೆ ಸಾಮರ್ಥ್ಯದ ಮಿನಿ ಟ್ರ್ಯಾಕ್ಟರ್ ಖರೀದಿಗೆ ಗರಿಷ್ಠ 1 ಲಕ್ಷ ರೂ. ಸಹಾಯಧನ ಲಭ್ಯವಿದೆ.

ಕೀಟ ರೋಗ ನಿಯಂತ್ರಣ ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ ರೈತರಿಗೆ ಅಡಿಕೆ ತೋಟಕ್ಕೆ ಕೊಳೆ ರೋಗ ನಿಯಂತ್ರಣಕ್ಕೆ, ಮೈಲುತುತ್ತ ಖರೀದಿಗೆ ಶೇ. 30ರ ಗರಿಷ್ಠ 1200 ರೂ. ಪ್ರತಿ ಹೆಕ್ಟೇರ್ ಗೆ ಲಭ್ಯವಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಈ ಕೆಳಕಂಡ ರೈತ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕೆ ಅಧಿಕಾರಿಗಳಿಗೆ ಸಂಪರ್ಕಿಸಲು ಕೋರಲಾಗಿದೆ.

  • ಕಸಬಾ ಹೋಬಳಿ : 8867621856
  • ಕೆರೆಹಳ್ಳಿ ಹೋಬಳಿ : 9481501571
  • ಹುಂಚ ಮತ್ತು ನಗರ ಹೋಬಳಿ : 6006338189

Leave a Comment

error: Content is protected !!