ಸರ್ವ ಶಿಕ್ಷಣ ಅಭಿಯಾನದ ಬಳಿಕ ದೇಶದಲ್ಲಿ ಶಿಕ್ಷಣ ಕ್ರಾಂತಿ ; ಶಾಸಕ ಬೇಳೂರು ಗೋಪಾಲಕೃಷ್ಣ

Written by Malnadtimes.in

Published on:

WhatsApp Group Join Now
Telegram Group Join Now

HOSANAGARA | ಸರ್ವ ಶಿಕ್ಷಣ ಅಭಿಯಾನ ಯೋಜನೆ ದೇಶದಲ್ಲಿ ಆರಂಭಗೊಂಡ ಬಳಿಕ ಶಿಕ್ಷಣ ಕ್ರಾಂತಿ ನಡೆದಿದೆ. ನಮ್ಮಲ್ಲಿರುವ ಪ್ರತಿಭಾನ್ವಿತರು ಇಂದು ವಿಶ್ವಮಟ್ಟದಲ್ಲಿ ಗುರುತಿಸಿಕೊಂಡಿದ್ದಾರೆ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದರು.

ತಾಲೂಕಿನ ಮಾರುತಿಪುರ ಸರ್ಕಾರಿ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದೆ. ನುರಿತ ಶಿಕ್ಷಕರಿದ್ದಾರೆ. ಆದರೂ ಸರ್ಕಾರಿ ಶಾಲೆಗಳು ಎಂದರೆ ಪೋಷಕರು ತಮ್ಮ ಮಕ್ಕಳನ್ನು ಕಳುಹಿಸಲು ಹಿಂದೇಟು ಹಾಕುತ್ತಾರೆ. ಕೆಲ ಶಾಲೆಗಳಲ್ಲಿ ಮೂಲಸೌಕರ್ಯ ಸಮಸ್ಯೆ ಇರಬಹುದು. ಅದನ್ನು ಹೊರತುಪಡಿಸಿದರೆ ಖಾಸಗಿ ಶಾಲೆಗಳಿಗಿಂತಲೂ ಉತ್ತಮ ಭೋದನೆ ಇಲ್ಲಿ ದೊರೆಯುತ್ತಿದೆ. ಗ್ರಾಮೀಣ ಮಕ್ಕಳೇ ಹೆಚ್ಚಾಗಿರುವ ಸರ್ಕಾರಿ ಶಾಲೆಗಳಲ್ಲಿಯೂ ಶೇ.100 ಫಲಿತಾಂಶ ಪಡೆಯುವುದು ಸುಲಭದ ಮಾತಲ್ಲ. ಇದೇ ಸರಕಾರಿ ಶಾಲೆಗಳ ಗುಣಮಟ್ಟಕ್ಕೆ ಸಾಕ್ಷಿಯಾಗಿದೆ ಎಂದರು.


ನೀಡ್‌ಬೇಸ್ ಸಂಸ್ಥೆಯ ಸಹಭಾಗಿತ್ವದಲ್ಲಿ ವಿದ್ಯಾರ್ಥಿಗಳಿಗೆ ಉಚಿತ ನೋಟ್‌ಬುಕ್ ವಿತರಣೆ ನಡೆಯಿತು. 4 ಲಕ್ಷ ರೂ. ವೆಚ್ಚದಲ್ಲಿ ಶಾಲೆಯ ಆವರಣದಲ್ಲಿ ನೂತನವಾಗಿ ನಿರ್ಮಿಸುತ್ತಿರುವ ಪ್ರಾರ್ಥನಾ ಭವನಕ್ಕೆ ಅವರು ಗುದ್ದಲಿಪೂಜೆ ನೆರವೇರಿಸಿದರು. ಎಸ್‌ಎಸ್‌ಎಲ್‌ಸಿಯಲ್ಲಿ ಹೆಚ್ಚು ಅಂಕ ಪಡೆದ ಮಕ್ಕಳನ್ನು ಹಾಗೂ ಶಿಕ್ಷಕವೃಂದವನ್ನು ಸನ್ಮಾನಿಸಲಾಯಿತು.

ಮುಖ್ಯ ಶಿಕ್ಷಕ ವಿಜಯಕುಮಾರಿ ಪ್ರಾಸ್ತಾವಿಕ ಮಾತನಾಡಿದರು. ಶಾಲಾಸಮಿತಿ ಅಧ್ಯಕ್ಷ ಮಂಜಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ನೀಡ್‌ಬೇಸ್ ಸಂಸ್ಥೆಯ ಸಂಚಾಲಕ ಸುಬ್ರಮಣ್ಯ ಮಕ್ಕಳಿಗೆ ಶುಭ ಹಾರೈಸಿದರು.

ಗ್ರಾಪಂ ಅಧ್ಯಕ್ಷೆ ದೀಪಿಕಾ, ಸದಸ್ಯರಾದ ಶಂಕರಶೆಟ್ಟಿ, ಗಣೇಶ್, ಪ್ರಕಾಶ, ಕ್ಷೇತ್ರ ಸಮನ್ವಯಾಧಿಕಾರಿ ರಂಗನಾಥ್, ಪ್ರಮುಖರಾದ ಬಿ.ಜಿ.ಚಂದ್ರಮೌಳಿ, ಹರತಾಳು ಜಯಶೀಲಪ್ಪ ಶಾಸಕರ ಆಪ್ತ ಕಾರ್ಯದರ್ಶಿ ಸಣ್ಣಕ್ಕಿ ಮಂಜು, ವೇದಿಕೆಯಲ್ಲಿದ್ದರು.

Leave a Comment

error: Content is protected !!