Karnataka Rain | ರಾಜ್ಯದಲ್ಲಿ ಮುಂದಿನ ಐದು ದಿನಗಳ ಕಾಲ ಮತ್ತೆ ಭಾರಿ ಮಳೆಯಾಗುವ (Heavy Rain) ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.
ಇನ್ನು ಸೋಮವಾರ ಕರಾವಳಿ ಕರ್ನಾಟಕಕ್ಕೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಆಗಸ್ಟ್ 20 ಹಾಗೂ 21ರಂದು ಕರಾವಳಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಆರೆಂಜ್ ಅಲರ್ಟ್ ಘೋಷಿಸಿದೆ.
ಮಲೆನಾಡು ಭಾಗಗಳಾದ ಶಿವಮೊಗ್ಗ ಹಾಗೂ ಚಿಕ್ಕಮಗಳೂರಿನ ಹಲವೆಡೆ ಗಾಳಿ ಸಹಿತ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಈ ಭಾಗಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಹಲವೆಡೆ ಹಗುರ ಮಳೆ ಬೀಳಲಿದೆ ಎಂದು ಇಲಾಖೆ ತಿಳಿಸಿದೆ.
ಇಂದಿನಿಂದ ಆಗಸ್ಟ್ 20ರವರೆಗೆ ಉತ್ತರ ಕರ್ನಾಟಕ ಭಾಗಕ್ಕೆ ಯೆಲ್ಲೋ ಅಲರ್ಟ್ ನೀಡಿದೆ. ಇಂದು ದಕ್ಷಿಣ ಭಾಗಕ್ಕೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.