THIRTHAHALLI | ಇಲ್ಲಿನ ಪಟ್ಟಣ ಪಂಚಾಯ್ತಿ ಅಧ್ಯಕ್ಷರಾಗಿ ರಹಮತುಲ್ಲಾ ಅಸಾದಿ, ಉಪಾಧ್ಯಕ್ಷರಾಗಿ ಮಾಜಿ ಅಧ್ಯಕ್ಷರಾಗಿದ್ದ ಗೀತಾ ರಮೇಶ್ ಆಯ್ಕೆಯಾಗಿದ್ದಾರೆ.
ಮುಂದಿನ 26 ತಿಂಗಳಿಗೆ ಅಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ, ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗದ ಮಹಿಳೆಗೆ ಮೀಸಲಾಗಿತ್ತು. ಇಂದು ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಿತು.
ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಸದಸ್ಯ ಮಾಜಿ ಅಧ್ಯಕ್ಷರಾದ ರಹಮತುಲ್ಲಾ ಅಸಾದಿ, ಬಿಜೆಪಿಯಿಂದ ಸೊಪ್ಪುಗುಡ್ಡೆ ರಾಘವೇಂದ್ರ, ಉಪಾಧ್ಯಕ್ಷರ ಸ್ಥಾನಕ್ಕೆ ಕಾಂಗ್ರೆಸ್ ಪಕ್ಷದಿಂದ ಗೀತಾ ರಮೇಶ್, ಬಿಜೆಪಿಯಿಂದ ಜ್ಯೋತಿ ಗಣೇಶ್ ನಾಮಪತ್ರ ಸಲ್ಲಿಸಿದ್ದರು.
ನೂತನ ಅಧ್ಯಕ್ಷರಾಗಿ ರಹಮತುಲ್ಲಾ ಅಸಾದಿ ಎರಡನೇ ಬಾರಿಗೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದು, ಉಪಾಧ್ಯಕ್ಷರಾಗಿ ಗೀತಾ ರಮೇಶ್ ಆಯ್ಕೆಯಾಗಿದ್ದಾರೆ.
ಅಸಾದಿ, ರತ್ನಾಕರ್ ಶೆಟ್ಟಿ, ಜಯಪ್ರಕಾಶ್ ಶೆಟ್ಟಿಯವರಿಗೆ ತಲಾ 8 ತಿಂಗಳ ಅಧಿಕಾರ ಸಿಗಲಿದೆ ಎಂದು ಹೇಳಲಾಗಿದೆ.