MUDIGERE | ಕೊಟ್ಚಿಗೆಹಾರ ಸಮೀಪದ ಬಣಕಲ್ ಬಳಿಯ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು, ರಸ್ತೆ ಬದಿಯಲ್ಲಿದ್ದ ಮನೆಯ ಗೋಡೆಗೆ ಅಪ್ಪಳಿಸಿದ ಘಟನೆ ಮಂಗಳವಾರ ಸಂಜೆ ನಡೆದಿದೆ.
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಎ.ಜೆ.ಪೌಲ್ಸನ್ ಎಂಬುವರ ಮನೆಯ ಗೋಡೆಗೆ ಹಾನಿಯಾಗಿದ್ದು, ಕಾರಿನಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅದೃಷ್ಟವಶಾತ್ ಮನೆಯಲ್ಲಿ ಯಾರೂ ಇಲ್ಲದ ಕಾರಣ ದೊಡ್ಡ ಅನಾಹುತವೊಂದು ತಪ್ಪಿದೆ.
ಬೆಂಗಳೂರಿನಿಂದ ಮೂಡುಬಿದಿರೆಗೆ ಹೋಗುತ್ತಿದ್ದ ಕಾರಿನಲ್ಲಿ ಮಹಿಳೆ ಮತ್ತು ಯುವಕ ಪ್ರಯಾಣಿಸುತ್ತಿದ್ದರು. ಗಾಯಗೊಂಡ ಇಬ್ಬರನ್ನೂ ಮಂಗಳೂರಿನ ಆಸ್ಪತ್ರೆಗೆ ಸಾಗಿಸಲಾಗಿದೆ. ಬಣಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.