HOSANAGARA | ಪಟ್ಟಣಕ್ಕೆ ಹೊಂದಿಕೊಂಡಿರುವ ಎಂ ಗುಡ್ಡೆಕೊಪ್ಪ ಗ್ರಾಮ ಪಂಚಾಯತಿಯ ಅಧ್ಯಕ್ಷರ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಪ್ರವೀಣ್ಕುಮಾರ್ ಜಿ.ಎನ್ ಅವಿರೋಧವಾಗಿ ಆಯ್ಕೆಯಾದರು. ಹಾಗೂ ಉಪಾಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಸುಧಾ ಮುಂದುವರೆದಿದ್ದಾರೆ.
ಬಿಜೆಪಿ ಪಕ್ಷದ ಹೊಂದಾಣಿಕೆಯಿಂದ ಅಧಿಕಾರ ಹಂಚಿಕೆಯಲ್ಲಿ ಈ ಹಿಂದೆ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದ ಓಂಕೇಶ ಗೌಡ ಪಕ್ಷದ ಮಾತಿಗೆ ತಪ್ಪದೇ ಅವಧಿ ಮುಗಿದ ತಕ್ಷಣ ತಮ್ಮ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು ತೆರವಾಗಿದ್ದ ಅಧ್ಯಕ್ಷರ ಚುನಾವಣೆ ಗುರುವಾರ ನಡೆದಿದ್ದು ಪ್ರವೀಣ್ಕುಮಾರ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಅಭಿನಂದನೆ :
ಹೊಸನಗರ ಕ್ಷೇತ್ರದಲ್ಲಿ ಎಲ್ಲ ಗ್ರಾಮ ಪಂಚಾಯಿತಿ ಪಟ್ಟಣ ಪಂಚಾಯತಿಯನ್ನು ಕಾಂಗ್ರೆಸ್ ತೆಕ್ಕೆಗೆ ಹಾಕಿಕೊಳ್ಳಬೇಕೆಂಬ ಹಠದಿಂದ ಎಲ್ಲ ಗ್ರಾಮ ಪಂಚಾಯತಿಯ ಚುನಾವಣೆಗೂ ಕಾಂಗ್ರೆಸ್ ಪಕ್ಷದವರು ತಲೆ ಹಾಕುತ್ತಿದ್ದು ಅದರಂತೆ ಎಂ ಗುಡ್ಡೆಕೊಪ್ಪ ಗ್ರಾಮ ಪಂಚಾಯತಿ ಕಾಂಗ್ರೆಸ್ ಪಕ್ಷದ ಮಡಿಲಿಗೆ ಹಾಕಿಕೊಳ್ಳಲು ಹರ ಸಾಹಸ ಮಾಡಿದ್ದಾರೆ. ಆದರೆ ನಮ್ಮ ಪಕ್ಷದ ನಿಷ್ಟಾವಂತ ಸದಸ್ಯರು ಕಾಂಗ್ರೆಸ್ ಪಕ್ಷಕ್ಕೆ ಯಾವುದೇ ರೀತಿಯಲ್ಲೂ ಬೆಂಬಲ ಸೂಚಿಸಿಲ್ಲ ಎಂ ಗುಡ್ಡೆಕೊಪ್ಪ ಗ್ರಾಮ ಪಂಚಾಯತಿ ಬಿಜೆಪಿ ಬೆಂಬಲಿತ ಆಡಳಿತ ಚುಕ್ಕಾಣಿ ಹಿಡಿದಿದ್ದು ಗ್ರಾಮ ಪಂಚಾಯತಿಯ ಎಲ್ಲ ಬಿಜೆಪಿ ಬೆಂಬಲಿತ ಸದಸ್ಯರಿಗೆ ಬಿಜೆಪಿ ಮಂಡಲದ ಅಧ್ಯಕ್ಷ ನಿಟ್ಟೂರು ಸುಬ್ರಹ್ಮಣ್ಯ ಅಭಿನಂದಿಸಿದ್ದಾರೆ.
ಈ ಅಭಿನಂದನಾ ಸಮಾರಂಭದಲ್ಲಿ ಮಂಡಲದ ಅಧ್ಯಕ್ಷ ನಿಟ್ಟೂರು ಸುಬ್ರಹ್ಮಣ್ಯ, ಗ್ರಾಮ ಪಂಚಾಯತಿ ಸದಸ್ಯೆ ಸುಧಾ, ಚಿಕ್ಕನಕೊಪ್ಪ ಶ್ರೀಧರ್, ಎನ್.ಆರ್ ದೇವಾನಂದ್, ಆಲವಳ್ಳಿ ವೀರೇಶ್, ಎ.ವಿ. ಮಲ್ಲಿಕಾರ್ಜುನ, ಹಾಲಗದ್ದೆ ಉಮೇಶ್, ಸತ್ಯನಾರಾಯಣ, ಶಿವಕುಮಾರ ಇನ್ನೂ ಮುಂತಾದವರು ಉಪಸ್ಥಿತರಿದ್ದರು.