HOSANAGARA ; ಇಲ್ಲಿನ ಉಪ-ನೋಂದಣಿ ಮತ್ತು ಮುದ್ರಾಂಕ ಇಲಾಖೆಯಲ್ಲಿ ಸೆ. 2ರ ಸೋಮವಾರದಿಂದ ಎನಿವೇರ್ ನೋಂದಣಿ ವ್ಯವಸ್ಥೆ ಜಾರಿಗೊಳಿಸಲಾಗಿದೆ ಎಂದು ಹೊಸನಗರದ ಉಪ ನೋಂದಣಾಧಿಕಾರಿ ರವಿ ಹೇಳಿದ್ದಾರೆ.
ಸುದ್ಧಿಗಾರರೊಂದಿಗೆ ಮಾತನಾಡಿದ ಅವರು,
ಕರ್ನಾಟಕ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಎಲ್ಲ ಜಿಲ್ಲೆಗಳಲ್ಲಿ ವ್ಯವಸ್ಥೆ ಜಾರಿಗೊಳಿಸಲಾಗಿದ್ದು ಅದರಂತೆ ಹೊಸನಗರದ ಉಪ-ನೋಂದಣಿ ಇಲಾಖೆಯಲ್ಲಿ ಅನುಷ್ಠಾನಗೊಳ್ಳಲಿದೆ ಎಂದು ತಿಳಿಸಿದರು.
ಈ ಎನಿವೇರ್ ವ್ಯವಸ್ಥೆಯನ್ನು ಸಾರ್ವಜನಿಕರು ಸದುಪಯೋಗ ಪಡಿಸಿಕೊಂಡು ತಮ್ಮ ಸಮೀಪದ ಅಥವಾ ನೋಂದಣಿಗೆ ಸ್ಲಾಟ್ ಲಭ್ಯವಿರುವ ಕಛೇರಿಯಲ್ಲಿ ದಸ್ತಾವೇಜು ನೋಂದಾಯಿಸಿಕೊಳ್ಳಬಹುದು ಎಂದು ತಿಳಿಸಿದರು.
ನೋಂದಣಿ ಕಛೇರಿಯ ಸಿಬ್ಬಂದಿಯಾದ ಜಯಲಕ್ಷ್ಮಿ, ಶ್ರೀನಾಥ್ ಇನ್ನೂ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.