ಕ್ರೀಡೆಯಲ್ಲಿ ಸೋಲುವ ಭಯ ಇರಬಾರದು, ಸೋಲೆ ಗೆಲುವಿನ ಮೆಟ್ಟಿಲಾಗಬೇಕು ; ಬಿಇಒ ಕೃಷ್ಣಮೂರ್ತಿ

Written by Malnadtimes.in

Published on:

WhatsApp Group Join Now
Telegram Group Join Now

RIPPONPETE ; ಕ್ರೀಡೆಯಲ್ಲಿ ಸೋಲು-ಗೆಲುವು ಮುಖ್ಯವಲ್ಲ ಭಾಗವಹಿಸುವುದು ಮುಖ್ಯವಾಗಿದ್ದು ಸೋಲೇ ಗೆಲುವಿನ ಸೋಪಾನವಾಗಿದ್ದು ತೀರ್ಪುಗಾರರು ಯಾವುದೇ ತಂಡಗಳಿಗೆ ಅನ್ಯಾಯವಾಗದಂತೆ ನ್ಯಾಯಯುತವಾದ ತೀರ್ಪುನ್ನು ನೀಡಬೇಕೇಂದು ತಾಲ್ಲೂಕಿನಲ್ಲಿ ಆರ್ಥಿಕವಾಗಿ ಹಿಂದೂಳಿದಿದ್ದರೂ ಸಹ ಶೈಕ್ಷಣಿಕವಾಗಿ ಮುಂದುವರಿದಿದ್ದು ರಾಜ್ಯ ರಾಷ್ಟ್ರ ಹಾಗೂ ಆಂತರಾಷ್ಟ್ರೀಯ ಮಟ್ಟದಲ್ಲಿ ಕ್ರೀಡೆಗಳಲ್ಲಿ ಭಾಗವಹಿಸಿ ತಾಲ್ಲೂಕಿನ ಕೀರ್ತಿ ತಂದ ಉತ್ತಮ ಕ್ರೀಡಾಪಟುಗಳು ನಮ್ಮ ತಾಲ್ಲೂಕಿನಲ್ಲಿ ಇರುವುದು ಸಂತೋಷದ ಸಂಗತಿಯಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್.ಆರ್.ಕೃಷ್ಣಮೂರ್ತಿ ಹೇಳಿದರು.

ರಿಪ್ಪನ್‌ಪೇಟೆಯ ಸರ್ಕಾರಿ ಪದವಿ ಪೂರ್ವ ಕಾಲೇಜ್‌ನ ಚಿನ್ನೇಗೌಡ ಕ್ರೀಡಾಂಗಣದಲ್ಲಿ ಹೊಸನಗರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಗ್ರಾಮ ಪಂಚಾಯಿತ್ ಬಾಳೂರು ರಿಪ್ಪನ್‌ಪೇಟೆ ಸಮೂಹ ಸಂಪನ್ಮೂಲ ಕೇಂದ್ರ, ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಪಾಠಶಾಲೆ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ 2024-25ನೇ ಸಾಲಿನ 14 ವರ್ಷದೊಳಗಿನ  ಹಿರಿಯ ಪ್ರಾಥಮಿಕ ಪಾಠ ಶಾಲೆಗಳ ಕ್ಲಸ್ಟರ್ ಮಟ್ಟದ ಕ್ರೀಡಾಕೂಟವನು ಉದ್ಘಾಟಿಸಿ ಮಾತನಾಡಿದರು.

ಕ್ರೀಡಾಕೂಟ ಸಮಾರಂಭವನ್ನು ಗ್ರಾಮ ಪಂಚಾಯಿತ್ ಆಧ್ಯಕ್ಷೆ ಧನಲಕ್ಷ್ಮಿ ಉದ್ಘಾಟಿಸಿ ಮಾತನಾಡಿ, ಮಕ್ಕಳು ಪ್ರಾಥಮಿಕ ಹಂತದಲ್ಲಿಯೇ ಕ್ರೀಡಾಕೂಟಗಳಲ್ಲಿ ಭಾಗವಹಿಸುವ ಗುಣವನ್ನು ಆಳವಡಿಸಿಕೊಂಡು ವಿದ್ಯಾಭ್ಯಾಸದ ಜೊತೆಗೆ ಕ್ರೀಡೆ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಬೇಕಿದೆ. ಕ್ರೀಡೆಗಳಲ್ಲಿ ಸೋಲು ಗೆಲುವು ಮುಖ್ಯವಲ್ಲ ಭಾಗವಹಿಸುವುದು ಬಹುಮುಖ್ಯವಾಗಿದ್ದು ಸೋಲುವ ಭಯ ಇಟ್ಟುಕೊಳ್ಳಬಾರದು ಸೋಲೆ ಗೆಲುವಿನ ಮೆಟ್ಟಿಲಾಗಿದ್ದು ಶಾಲೆಗಳಲ್ಲಿ ಶಿಕ್ಷಕರು ಶಿಕ್ಷಣದ ಜೊತೆ ಕ್ರೀಡೆ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಭಾಗವಹಿಸುವಂತೆ ಮಕ್ಕಳಿಗೆ ಪೋತ್ಸಾಹ ನೀಡಬೇಕೆಂದು ಕರೆ ನೀಡಿದರು.

ಈ ಸಮಾರಂಭದ ಅಧ್ಯಕ್ಷತೆಯನ್ನು ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯ ಎಸ್.ಡಿ.ಎಂ.ಸಿ. ಅಧ್ಯಕ್ಷ ಮಂಜಪ್ಪ ಅಧ್ಯಕ್ಷತೆ ವಹಿಸಿದ್ದರು. ಈ ಸಮಾರಂಭದಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ಅಶ್ವಿನಿ ರವಿಶಂಕರ, ಜಿ.ಡಿ.ಮಲ್ಲಿಕಾರ್ಜುನ, ಗಣಪತಿ ಗವಟೂರು, ಬಾಳೂರು ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀನಿವಾಸ ಆಚಾರ್, ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯ ಮುಖ್ಯಶಿಕ್ಷಕ ರೇಣುಕಪ್ಪ, ಸಿ.ಆರ್.ಸಿ. ಮತ್ತು ಬಿ.ಆರ್.ಆರ್.ಸಿ.ಯ ಅಧಿಕಾರಿ ವರ್ಗ ಶಾಲಾ ದೈಹಿಕ ಶಿಕ್ಷಕ ಸಮೂಹ ಸೇರಿದಂತೆ ಪೋಷಕವರ್ಗ ಹಾಜರಿದ್ದರು.

ಸಮೂಹ ಸಂಪನ್ಮೂಲ ವ್ಯಕ್ತಿ ಮಂಜುನಾಥ, ಸ್ವಾಗತಿಸಿದರು. ಸುಧಾರಾಣಿ ಕಾರ್ಯಕ್ರಮ ನಿರೂಪಿಸಿದರು. ಮುಖ್ಯಶಿಕ್ಷಕ ರೇಣುಕಪ್ಪ, ವಂದಿಸಿದರು.

Leave a Comment

error: Content is protected !!