ರೈತರಿಗೆ ಶೇ.50 ರ ರಿಯಾಯಿತಿಯಲ್ಲಿ ಕೃಷಿ ಯಂತ್ರೋಪಕರಣಗಳು ಲಭ್ಯ !

Spread the love

Agricultural machinery available for farmers at a 50% discount :ಪ್ರಸಕ್ತ 2025–26 ಸಾಲಿನಲ್ಲಿ ಕೃಷಿ ಯಾಂತ್ರೀಕರಣ ಮತ್ತು ಕೃಷಿ ಉತ್ಪನ್ನಗಳ ಸಂಸ್ಕರಣೆ ಕಾರ್ಯಕ್ರಮದ ಅಡಿಯಲ್ಲಿ ಸಾಮಾನ್ಯ ವರ್ಗದ ರೈತರಿಗೆ ಕೃಷಿ ಉಪಕರಣಗಳ ಖರೀದಿಗೆ ಶೇ.50 ರ ರಿಯಾಯಿತಿಯನ್ನು ನೀಡಲಾಗುತ್ತಿದೆ.

ಆಸಕ್ತ ರೈತರು ತಮ್ಮ ವ್ಯಾಪ್ತಿಯ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಉಚಿತ ಅರ್ಜಿ ನಮೂನೆಯನ್ನು ಪಡೆದು, ಅದರೊಂದಿಗೆ ಈ ಕೆಳಗಿನ ದಾಖಲೆಗಳನ್ನು ಸಂಯೋಜಿಸಿ ಸಲ್ಲಿಸಬೇಕು:

  • ಪಹಣಿ (ಆರ್‌ಟಿಸಿ) ಪ್ರತಿಯೊಂದು
  • ಆಧಾರ್ ಕಾರ್ಡ್ ಜೆರಾಕ್ಸ್
  • ಬ್ಯಾಂಕ್ ಪಾಸ್‌ಬುಕ್‌ನ ಪ್ರತಿ
  • ಒಂದು ಪಾಸ್ಪೋರ್ಟ್ ಗಾತ್ರದ ಭಾವಚಿತ್ರ
  • ರೂ.100 ರ ಸ್ಟಾಂಪ್ ಪೇಪರ್‌ನಲ್ಲಿ ಘೋಷಣೆ ಪತ್ರ

ರೈತರು ಈ ಯೋಜನೆಯಡಿಯಲ್ಲಿ ಪವರ್ ಟಿಲ್ಲರ್, ಕಲ್ಟಿವೇಟರ್, ರೋಟವೇಟರ್, ಎಂಬಿಪ್ಲೋ, ಡಿಸ್ಕ್ ಪ್ಲೋ, ಕಳೆಕೊಚ್ಚುವ ಯಂತ್ರ, ಕಳೆ ತೆಗೆಯುವ ಯಂತ್ರ, ಡೀಸೆಲ್ ಪಂಪ್ ಸೆಟ್, ಪವರ್ ಸ್ಪ್ರೇಯರ್, ಮೇವು ಕತ್ತರಿಸುವ ಯಂತ್ರ, ಭತ್ತದ ಒಕ್ಕಣೆ ಯಂತ್ರ, ಭತ್ತ ಕಟಾವು ಯಂತ್ರ, ಮುಸುಕಿನ ಜೋಳ ಒಕ್ಕಣೆ ಯಂತ್ರ ಮತ್ತು ಕೃಷಿ ಉತ್ಪನ್ನಗಳ ಸಂಸ್ಕರಣೆಗೆ ಬೇಕಾದ ರಾಗಿ ಕ್ಲೀನಿಂಗ್ ಯಂತ್ರ, ಹಿಟ್ಟು ಮಾಡುವ ಯಂತ್ರ, ಮೆಣಸಿನಕಾಯಿ ಪುಡಿ ಮಾಡುವ ಯಂತ್ರ, ಹಾಗೂ ವಿವಿಧ ಎಣ್ಣೆ ಗಾಣಗಳನ್ನು ಶೇ.50 ರ ಸಹಾಯಧನದಲ್ಲಿ ಪಡೆಯಬಹುದಾಗಿದೆ.

ಈ ಅವಕಾಶವನ್ನು ಸದ್ವಪಯೋಗಪಡಿಸಿಕೊಳ್ಳಲು ಅರ್ಜಿದಾರರು ತಮಗೆ ಸೇರಿರುವ ಹೋಬಳಿಯ ರೈತ ಸಂಪರ್ಕ ಕೇಂದ್ರಕ್ಕೆ ಅರ್ಜಿಯನ್ನು ಸಲ್ಲಿಸಬೇಕೆಂದು ಸಹಾಯಕ ಕೃಷಿ ನಿರ್ದೇಶಕರು ಮನವಿ ಮಾಡಿದ್ದಾರೆ.

Read More :RRB Technician ನೇಮಕಾತಿ 2025: ನಿಮ್ಮ ಕನಸಿನ ಸರ್ಕಾರಿ ಉದ್ಯೋಗಕ್ಕೆ ಅವಕಾಶ!

Leave a comment