Rain Alert | ಇನ್ನೂ 4 ದಿನ ಮುಂದುವರೆಯಲಿದೆ ಮಳೆ, 7 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

Written by Malnadtimes.in

Updated on:

WhatsApp Group Join Now
Telegram Group Join Now

ಬೆಂಗಳೂರು : ರಾಜ್ಯದಲ್ಲಿ ಇನ್ನೂ ನಾಲ್ಕು ದಿನಗಳ ಕಾಲ ಮಳೆ  (Rain) ಮುಂದುವರೆಯಲಿದ್ದು 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ (Yellow Alert) ಘೋಷಿಸಲಾಗಿದೆ.

ಚಿಕ್ಕಮಗಳೂರು, ದಕ್ಷಿಣ ಕನ್ನಡ, ಕೊಡಗು, ಶಿವಮೊಗ್ಗ, ಯಾದಗಿರಿ, ಹಾಸನ, ಮೈಸೂರು ಸೇರಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರ್ನಾಟಕದ ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ಉತ್ತರ ಒಳನಾಡಿನ ಯಾದಗಿರಿ, ಕಲಬುರಗಿಯಲ್ಲಿ ಇಂದಿನಿಂದ ಮೇ 17ರವರೆಗೆ ಬಿರುಗಾಳಿ ಸಹಿತ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.

ರಾಜ್ಯದ ವಿವಿಧ ಭಾಗಗಳಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಮಳೆಯಾಗುತ್ತಿದೆ. ಇಂದೂ ಕೂಡ ಮಳೆ ಮುಂದುವರೆಯಲಿದೆ.

Leave a Comment

error: Content is protected !!