Rain Alert | ಇನ್ನೊಂದು ವಾರ ರಾಜ್ಯದಲ್ಲಿ ಭಾರಿ ಮಳೆ ಮುನ್ಸೂಚನೆ, ಇಂದು ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

Written by Malnadtimes.in

Published on:

WhatsApp Group Join Now
Telegram Group Join Now

ಬೆಂಗಳೂರು : ಮಳೆಯಾರ್ಭಟ ಮುಂದುವರಿದಿದ್ದು, ಮೇ 21ರವರೆಗೆ ರಾಜ್ಯದ ಹಲವು ಪ್ರದೇಶಗಳಲ್ಲಿ ಭಾರಿ ಮಳೆಯಾಗುವ (Heavy Rainfall) ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಕರಾವಳಿ ಜಿಲ್ಲೆಗಳ ಕೆಲವೆಡೆ, ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ಹಲವು ಕಡೆಗಳಲ್ಲಿ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ಇಂದು ತುಮಕೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ದಾವಣಗೆರೆ, ಕೊಡಗು, ಮೈಸೂರು, ಚಾಮರಾಜನಗರ, ಶಿವಮೊಗ್ಗ, ಮಂಡ್ಯ, ಬಳ್ಳಾರಿ, ಹಾಸನ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಳಗಾವಿ, ಬೀದರ್, ಧಾರವಾಡ, ಹಾವೇರಿ ಜಿಲ್ಲೆಗಳಲ್ಲಿ ಉಡುಪಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಚಿತ್ರದುರ್ಗ, ಕೋಲಾರ, ವಿಜಯನಗರ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಲಾಗಿದೆ.

Leave a Comment

error: Content is protected !!