Rain Alert | ಮುಂದಿನ 24 ಗಂಟೆಗಳಲ್ಲಿ ರಾಜ್ಯದ 18 ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ, ಯೆಲ್ಲೋ ಅಲರ್ಟ್ ಘೋಷಣೆ

Written by Malnadtimes.in

Published on:

WhatsApp Group Join Now
Telegram Group Join Now

ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಯಲ್ಲಿ ಭಾರಿ ಪ್ರಮಾಣ ಮಳೆಯಾಗುವ (Heavy Rain) ಸಾಧ್ಯತೆ ಇರುವುದರಿಂದ ಉತ್ತರ ಕರ್ನಾಟಕದ ನಾಲ್ಕು ಜಿಲ್ಲೆ ಸೇರಿದಂತೆ ರಾಜ್ಯದ 18 ಜಿಲ್ಲೆಗಳಿಗೆ ಹವಾಮಾನ ಇಲಾಖೆ ‘ಯೆಲ್ಲೋ ಅಲರ್ಟ್’ (Yellow Alert) ಎಚ್ಚರಿಕೆ ನೀಡಿದೆ.

ಸುಳಿಗಾಳಿ ಪ್ರಭಾವದಿಂದ ರಾಜ್ಯದಲ್ಲಿ ಮಳೆಯಾಗುತ್ತಿದ್ದು, ಮುಂದಿನ ಒಂದು ವಾರ ರಾಜ್ಯಾದ್ಯಂತ ಉತ್ತಮ ಮಳೆ ನಿರೀಕ್ಷಿಸಲಾಗಿದೆ.

ಮುಂದಿನ 24 ಗಂಟೆಯಲ್ಲಿ ಬೀದರ್, ಕಲಬುರಗಿ, ರಾಯಚೂರು, ಕೊಪ್ಪಳ, ಬಳ್ಳಾರಿ, ಬೆಂಗಳೂರು ನಗರ, ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಮಂಡ್ಯ, ಮೈಸೂರು, ಕೊಡಗು, ಕೋಲಾರ, ರಾಮನಗರ, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳಲ್ಲಿ 6 ರಿಂದ 11 ಸೆಂ.ಮೀ ವರೆಗೆ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಈ ಎಚ್ಚರಿಕೆ ನೀಡಲಾಗಿದೆ.

ಮೇ 10 ರಿಂದ ಮಳೆ ಪ್ರಮಾಣ ಇನ್ನಷ್ಟು ಜಿಲ್ಲೆಗಳಿಗೆ ವ್ಯಾಪಿಸಲಿದ್ದು, ಮೇ 13 ರವರೆಗೆ ರಾಜ್ಯದ ಬಹುತೇಕ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಎಚ್ಚರಿಕೆಯ ನೀಡಲಾಗಿದೆ.

Leave a Comment

error: Content is protected !!