ಆಟೋ ಪಲ್ಟಿಯಾಗಿ ಚಾಲಕ ಸಾವು !  

Written by Malnadtimes.in

Updated on:

WhatsApp Group Join Now
Telegram Group Join Now

ಮೂಡಿಗೆರೆ ‌: ಚಾಲಕನ ನಿಯಂತ್ರಣ ತಪ್ಪಿ ಆಟೋವೊಂದು ಪಲ್ಟಿಯಾಗಿ ಚಾಲಕ ಮೃತಪಟ್ಟ ಘಟನೆ ಮೂಡಿಗೆರೆ (Mudigere) ತಾಲೂಕಿನ ಬಣಕಲ್ – ಕೊಟ್ಟಿಗೆಹಾರ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ.

ಮೃತ ಚಾಲಕನನ್ನು ಮೂಡಿಗೆರೆ ತಾಲೂಕಿನ ಮಲೆಮನೆ ನಿವಾಸಿ ರವಿ (28) ಎಂದು ಗುರುತಿಸಲಾಗಿದೆ.

ಗಂಭೀರ ಗಾಯಗೊಂಡಿದ್ದ ಈತನನ್ನು ಮೂಡಿಗೆರೆ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ. ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment

error: Content is protected !!