ಶೃಂಗೇರಿ ಶಾರದಾಂಬೆ ದರ್ಶನಕ್ಕೆ ಬಂದಿದ್ದ ಬೆಂಗಳೂರಿನ ಪೊಲೀಸ್ ಪೇದೆ ಮೇಲೆ ದೇವಸ್ಥಾನದ ಮುಂಭಾಗದಲ್ಲೇ ಮಾರಣಾಂತಿಕ ಹಲ್ಲೆ

Written by Malnadtimes.in

Updated on:

WhatsApp Group Join Now
Telegram Group Join Now

Chikkamagaluru : ಶೃಂಗೇರಿ ಶಾರದಾಂಬೆಯ ದರ್ಶನಕ್ಕೆ (Sringeri Sharadamba Temple) ಬಂದಿದ್ದ ಬೆಂಗಳೂರು ರಾಜಗೋಪಾಲನಗರ ಪೊಲೀಸ್ ಠಾಣೆಯ (Police Station) ಪೇದೆ ಮೇಲೆ ದೇಗುಲದ (Temple) ಮುಂಭಾಗದಲ್ಲೇ ಹಲ್ಲೆ ನಡೆಸಿರುವ ಘಟನೆ ಶೃಂಗೇರಿಯಲ್ಲಿ ನಡೆದಿದೆ.

ಮೇ 26 ರಂದು ರಾತ್ರಿ 12:30ಕ್ಕೆ ದೇವಸ್ಥಾನದ ಮುಂಭಾಗದಲ್ಲಿ ಕಾರು ನಿಲ್ಲಿಸಿದ್ದಾಗ ಈ ಘಟನೆ ನಡೆದಿದ್ದು, ಪೇದೆ ರಾಜೇಗೌಡ, ಪತ್ನಿ ಕುಸುಮ ಹಾಗೂ ಅವರ ಅಣ್ಣ-ಅತ್ತಿಗೆಯ ಮೇಲೆ ಹಲ್ಲೆ ನಡೆಸಲಾಗಿದೆ ಎನ್ನಲಾಗುತ್ತಿದೆ.

ಆರೋಪಿ

ಓರ್ವನ ಬಂಧನ :

ಶೃಂಗೇರಿ ಪಟ್ಟಣದ ಸ್ಪರ್ಶಿತ್ ಎಂಬ ವ್ಯಕ್ತಿಯಿಂದ ಪೇದೆ ಮೇಲೆ ಹಲ್ಲೆ ನಡೆಸಿದ್ದು, ಶೃಂಗೇರಿ ಕಾರು ಪಾರ್ಕಿಂಗ್ ಸ್ಥಳದಲ್ಲಿ ಕೆಲಸ ಮಾಡುತ್ತಿದ್ದ ಈತನನ್ನು ಪೊಲೀಸರು ಬಂಧಿಸಿದ್ದಾರೆ.

ಕಾರು ತೆಗೆಯುವಂತೆ ಗಲಾಟೆ :

ಬೆಂಗಳೂರು ಮೂಲದ ಪೊಲೀಸ್ ಪೇದೆ ರಾಜೇಗೌಡ ಮತ್ತು ಕುಟುಂಬ ಶೃಂಗೇರಿ ಶಾರದಾಂಬೆಯ ದರ್ಶನಕ್ಕೆ ಬಂದಿದ್ದರು. ಈ ವೇಳೆ ರಾತ್ರಿ 12:30ರ ಸುಮಾರಿಗೆ ಪೇದೆಯ ಅಣ್ಣ-ಅತ್ತಿಗೆ ಉಳಿಯಲು ಲಾಡ್ಜ್ ಕೇಳಲು ಹೋಗಿದ್ದರು. ಆಗ ಸ್ಕೂಟಿಯಲ್ಲಿ ಬಂದ ಇಬ್ಬರು ಹಾಗೂ ದೇವಾಲಯದ ಮುಂಭಾಗವಿದ್ದ ಮತ್ತಿಬ್ಬರು ಸೇರಿ ಗಲಾಟೆ ಮಾಡಿದ್ದು, ದೇವಸ್ಥಾನದ ಮುಂಭಾಗ ಇದ್ದ ಕಾರು ತೆಗೆಯುವಂತೆ ಗಲಾಟೆ ಮಾಡಿದ್ದಾರೆ.

ಕಬ್ಬಿಣದ ರಾಡ್‌ನಿಂದ ಹಲ್ಲೆ :

ಈ ವೇಳೆ ಕಬ್ಬಿಣದ ರಾಡ್‌ನಿಂದ ಪೇದೆ ರಾಜೇಗೌಡ ಮೇಲೆ ಹಲ್ಲೆಗೆ ಯತ್ನಿಸಿದ್ದು, ಗಲಾಟೆ ಬಿಡಿಸಲು ಬಂದ ಪೇದೆ ಅಣ್ಣ ಉಮೇಶ್ ಮೇಲೂ ಹಲ್ಲೆ ನಡೆಸಿದ್ದಾರೆ. ಪೇದೆ ರಾಜೇಗೌಡ ಹಾಗೂ ಉಮೇಶ್ ಇಬ್ಬರ ಕೈಗೂ ಗಂಭೀರ ಗಾಯಗಳಾಗಿದ್ದು, ಎಲ್ಲರನ್ನೂ ಕೊಲೆ ಮಾಡುವುದಾಗಿ ಸ್ಪರ್ಶಿತ್ ಮತ್ತು ಸಹಚರರು ಬೆದರಿಕೆ ಹಾಕಿದ್ದಾರೆ ಎಂದು ದೂರಲಾಗಿದೆ.

ಈ ಘಟನೆ ಸಂಬಂಧ ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment

error: Content is protected !!