Heavy Rain |  ಮಲೆನಾಡಿನಲ್ಲಿ ಅಬ್ಬರಿಸಿದ ವರುಣ

Written by Malnadtimes.in

Published on:

WhatsApp Group Join Now
Telegram Group Join Now

ಶೃಂಗೇರಿ : ಕಳೆದೊಂದು ವಾರದಿಂದ ಮಲೆನಾಡು (Malenadu) ಪ್ರದೇಶದಲ್ಲಿ ಮಳೆಯಾಗುತ್ತಿದ್ದು (Rain) ಬಿಸಿಲಿನ ಬೇಗೆಯಿಂದ ಬಸವಳಿದಿದ್ದ ಜನರಲ್ಲಿ ಮಂದಹಾಸ ಮೂಡಿಸಿದೆ.

ಮಂಗಳವಾರ ಶೃಂಗೇರಿ ತಾಲೂಕಿನ ಸುತ್ತಮುತ್ತ ಧಾರಾಕಾರ ಮಳೆಯಾಗಿದೆ. ಬೆಳಿಗ್ಗೆಯಿಂದ ಬಿಸಿಲ ಝಳ ಹೆಚ್ಚಾಗಿದ್ದು ಮಧ್ಯಾಹ್ನದ ವೇಳೆಗೆ ಗುಡುಗು ಸಹಿತ ಒಂದು ಗಂಟೆಗೂ ಹೆಚ್ಚು ಕಾಲ ಭಾರಿ ಮಳೆಯಾಗಿದೆ.

ಮಳೆಯಿಂದ ಪ್ರವಾಸಿಗರ ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು. ಇನ್ನೂ ತುಂಗಾ ನದಿಯ ಹರಿವು ಸ್ವಲ್ಪ ಮಟ್ಟಿಗೆ ಹೆಚ್ಚಾಗಿದೆ.

ಮಳೆಯಿಂದಾಗಿ ಅಡಿಕೆ, ಕಾಫಿ ಬೆಳೆಗಾರರ ಮೊಗದಲ್ಲಿ ಮಂದಹಾಸ ಮೂಡಿಸಿದರೆ, ಶೃಂಗೇರಿ ಸುತ್ತಮುತ್ತ ಪ್ರವಾಸಿ ತಾಣಕ್ಕೆ ಆಗಮಿಸಿದ ಪ್ರವಾಸಿಗರಿಗೆ ಇಲ್ಲಿನ‌ ಪ್ರಕೃತಿ ಸೌಂದರ್ಯ ಸವಿಯಲು ಮಳೆ ಅಡ್ಡಿಯಾಗಿತ್ತು.

ಚಿಕ್ಕಮಗಳೂರು ಜಿಲ್ಲೆಯ ಪಶ್ಚಿಮಘಟ್ಟ ಪ್ರದೇಶದಲ್ಲಿ ಕಳೆದ ಒಂದು ವಾರದಿಂದ ಮಳೆಯಾಗುತ್ತಿದ್ದು ಹರಿವು ನಿಲ್ಲಿಸಿದ್ದ ತುಂಗಾ ನದಿಯಲ್ಲಿ ನೀರಿನ ಹರಿವು ಕೊಂಚ ಮಟ್ಟಿಗೆ ಏರಿಕೆ ಕಂಡಿದೆ.

ಇನ್ನೂ ಶಿವಮೊಗ್ಗ ಜಿಲ್ಲೆಯ ಹಲವೆಡೆ ಇಂದು ಧಾರಾಕಾರವಾಗಿ ಮಳೆ ಸುರಿದಿದೆ. ಸೊರಬ ತಾಲ್ಲೂಕಿನ ಚಂದ್ರಗುತ್ತಿಯಲ್ಲಿ ಒಂದು ಗಂಟೆಗೂ ಹೆಚ್ಚು ಕಾಲ ಧಾರಾಕಾರವಾಗಿ ಬಿರುಗಾಳಿ ಸಹಿತ ಮಳೆ ಸುರಿದಿದ್ದು ವಿದ್ಯುತ್ ಕಂಬಗಳು ಸೇರಿದಂತೆ ಮರಗಳು ಧರೆಗುರುಳಿವೆ. ಹೊಸನಗರ, ತೀರ್ಥಹಳ್ಳಿ, ಸಾಗರ, ಶಿಕಾರಿಪುರ ತಾಲ್ಲೂಕಿನಲ್ಲೂ ಮಳೆಯಾಗಿದೆ.

Leave a Comment

error: Content is protected !!