ಭವಿಷ್ಯದಲ್ಲಿ ಉತ್ತಮ ನಾಗರಿಕರಾಗಿ ಬೆಳೆಯಿರಿ ; ಸುಮಾ ಸುಬ್ರಹ್ಮಣ್ಯ

By malnad tech

Published on:

Spread the love

ಹೊಸನಗರ ; ಭವಿಷ್ಯದಲ್ಲಿ ಉತ್ತಮ ನಾಗರಿಕರಾಗಿ ಬೆಳೆಯಿರಿ ಎಂದು ಹೊಸನಗರ ಕೆಡಿಪಿ ಸದಸ್ಯೆ ಸುಮಾ ಸುಬ್ರಹ್ಮಣ್ಯ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಅವರು ಇಂದು ನಿಟ್ಟೂರಿನ ಪ್ರಜ್ಞಾಭಾರತಿ ವಿದ್ಯಾ ಕೇಂದ್ರದ ಆಶ್ರಯದಲ್ಲಿ ನಗರ ಹೋಬಳಿ 17 ವರ್ಷದೊಳಗಿನ ವಯೋಮಿತಿಯ ಪ್ರೌಢಶಾಲಾ ವಿದ್ಯಾರ್ಥಿ ವಿದ್ಯಾರ್ಥಿನಿಯರ ಕ್ರೀಡಾಕೂಟ ನಿಟ್ಟೂರಿನ ಕಾಲೇಜು ಮೈದಾನದಲ್ಲಿ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳಾದ ನಿಮ್ಮ ಉನ್ನತಿಗಾಗಿ ಶ್ರಮಿಸುತ್ತಿರುವ ಪೋಷಕರನ್ನ ಗೌರವಿಸುತ್ತಾ ಹಾಗೂ ಶಿಕ್ಷಕರ ಮಾರ್ಗದರ್ಶನದಲ್ಲಿ ಉತ್ತಮ ನಾಗರಿಕರಾಗಿ ಬದುಕಿ ಎಂದು ಹಾರೈಸಿ, ಕ್ರೀಡೆಯು ದೈಹಿಕ ಹಾಗೂ ಮಾನಸಿಕ ಪರಿಣಾಮಗಳನ್ನು ಹೇಗೆ ಬೀರುತ್ತದೆ ಎಂದು ವಿದ್ಯಾರ್ಥಿಗಳಿಗೆ ಮನಮುಟ್ಟುವಂತೆ ತಿಳಿಸಿದರು.

ಗ್ರಾಮ ಪಂಚಾಯತ್ ಸದಸ್ಯ ನಾಗೋಡಿ ವಿಶ್ವನಾಥ ಮಾತನಾಡಿ, ನಿಟ್ಟೂರು ಭಾಗದ ಯುವಕರ ಹಾಗೂ ವಿದ್ಯಾರ್ಥಿಗಳ ಬಹುದಿನದ ಕನಸಾಗಿರುವ ಸುಸಜ್ಜಿತ ಕ್ರೀಡಾಂಗಣ ನಿರ್ಮಾಣದ ಕುರಿತು ಶಾಸಕರೊಂದಿಗೆ ಮಾತನಾಡಿ ಅನುದಾನ ತರುವ ಬಗ್ಗೆ ಗಂಭೀರ ಹಾಗೂ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಈ ಸಂದರ್ಭದಲ್ಲಿ ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಜ್ಞಾ ಭಾರತಿ ವಿದ್ಯಾ ಕೇಂದ್ರದ ಅಧ್ಯಕ್ಷ ಶ್ರೀಕಾಂತ್ ಅಟ್ಟಳ್ಳಿ ವಹಿಸಿದ್ದರು. ಗ್ರಾಮ ಪಂಚಾಯತ್ ಅಧ್ಯಕ್ಷೆ ಚಂದ್ರಾವತಿ ಶೆಟ್ಟಿ, ಗ್ರಾಮ ಪಂಚಾಯತ್ ಸದಸ್ಯರಾದ ಶೋಭಾ ಉದಯ್ ಕುಮಾರ್, ಪುರುಷೋತ್ತಮ್ ಶಾನುಭೋಗ್, ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಉಪಾಧ್ಯಕ್ಷ ಜೆ.ವಿ ಸುಬ್ರಮಣ್ಯ, ಎಸ್.ಡಿ.ಎಂ.ಸಿ ಅಧ್ಯಕ್ಷ ಗೋಪಾಲ ಕಟ್ಟಿನಹೊಳೆ, ನಿಟ್ಟೂರು ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಗಣೇಶ, ತಾಲೂಕು ದೈವಿಕ ಪರಿವೀಕ್ಷಕ ವಿನಯ್ ಭಾಗವಹಿಸಿದ್ದರು.

ಇದೇ ಸಂದರ್ಭದಲ್ಲಿ ನಿಟ್ಟೂರಿನ ಹಿರಿಯ ಕ್ರೀಡಾಪಟು ವಾಲಿಬಾಲ್ ತರಬೇತುದಾರ ಲಕ್ಮನೆ ರಾಧಾಕೃಷ್ಣ ಇವರನ್ನು ಸನ್ಮಾನಿಸಲಾಯಿತು.

Leave a comment