ಹೊಸನಗರ: ಹೊಸನಗರ ತಾಲೂಕಿನ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಮೆಟ್ರಿಕ್ ಪೂರ್ವ (9 ಮತ್ತು 10ನೇ ತರಗತಿ) ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿವೇತನವನ್ನು 2025–26ನೇ ಶೈಕ್ಷಣಿಕ ಸಾಲಿಗೆ ಮಂಜೂರು ಮಾಡಲಾಗಿದೆ.
ಈ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಸಲ್ಲಿಸಲು, ವಿದ್ಯಾರ್ಥಿಗಳು ಭಾರತ ಸರ್ಕಾರದ Ministry of Electronics and Information Technology ಇಲಾಖೆ ಅಭಿವೃದ್ಧಿಪಡಿಸಿರುವ National Scholarship Portal ನಲ್ಲಿ ಮೊದಲು One Time Registration ಸಂಖ್ಯೆಯನ್ನು ಸೃಷ್ಟಿಸಬೇಕಾಗುತ್ತದೆ. ಈ ನೋಂದಣಿ ಮಾಡಿದ ನಂತರ, ವಿದ್ಯಾರ್ಥಿಗಳು ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದಲ್ಲಿ ಅರ್ಜಿ ಸಲ್ಲಿಸಬೇಕಾಗುತ್ತದೆ.
ಅದರಂತೆ, ಹೊಸನಗರ ತಾಲೂಕಿನ ಮೆಟ್ರಿಕ್ ಪೂರ್ವ (9 ಮತ್ತು 10ನೇ ತರಗತಿ) ಹಾಗೂ ಮೆಟ್ರಿಕ್ ನಂತರದ ಕೋರ್ಸ್‌ಗಳಲ್ಲಿ ಅಧ್ಯಯನ ಮಾಡುತ್ತಿರುವ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಈ ಅವಕಾಶವನ್ನು ಪಡೆದುಕೊಳ್ಳಲು https://scholarships.gov.in ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬೇಕಾಗಿದೆ ಎಂದು ಹೊಸನಗರದ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ಗೀತಾ ಅವರು ತಿಳಿಸಿದ್ದಾರೆ.
ಅರ್ಜಿದಾರರು ತಮ್ಮ ಆಧಾರ ದಾಖಲೆಗಳೊಂದಿಗೆ ಸಮಯದಲ್ಲಿ ಅರ್ಜಿ ಸಲ್ಲಿಸುವಂತೆ ವಿನಂತಿಸಲಾಗಿದೆ. ಈ ವಿದ್ಯಾರ್ಥಿವೇತನ ಯೋಜನೆಯು ವಿದ್ಯಾರ್ಥಿಗಳ ಶೈಕ್ಷಣಿಕ ಭದ್ರತೆಗೆ ಸಹಾಯವಾಗಲಿದ್ದು, ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ಇದರ ಲಾಭ ಪಡೆಯಬೇಕು ಎಂಬುದು ಇಲಾಖೆಯ ಆಶಯವಾಗಿದೆ.
“ಮಾಧ್ಯಮ ಒಂದು ಶಕ್ತಿ – ನಿಷ್ಪಕ್ಷಪಾತ ಸುದ್ದಿಯೇ ನಮ್ಮ ಧ್ಯೇಯ” ಎಂಬ ಧೋರಣೆಯೊಂದಿಗೆ, ನಾನು 7 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ನಿರಂತರ ಸೇವೆ ಸಲ್ಲಿಸುತ್ತಿದ್ದೇನೆ. ಸ್ಥಳೀಯ ಸುದ್ದಿಗಳಿಂದ ಅಂತಾರಾಷ್ಟ್ರೀಯ ವಿಷಯಗಳವರೆಗೆ, ನಿಖರವಾದ ವರದಿ ಮತ್ತು ಪ್ರಾಮಾಣಿಕ ಮಾಹಿತಿಯನ್ನೇ ಒದಗಿಸಲು ನಮ್ಮ ಪ್ಲಾಟ್ಫಾರ್ಮ್ ಆರಂಭಿಸಲಾಗಿದೆ.ಜವಾಬ್ದಾರಿ ಹಾಗೂ ನೈತಿಕತೆ ಪ್ರಧಾನ ಗುರಿಗಳಾಗಿದ್ದು, truth-first journalism ನಮ್ಮ ಧ್ಯೇಯ.