ರಿಪ್ಪನ್‌ಪೇಟೆ ; ಇಲ್ಲಿನ ಶಿವಮೊಗ್ಗ ರಸ್ತೆಯ ನಿವಾಸಿ ಮುರುಗೆಮ್ಮ ಗುರುಪಾದಯ್ಯ (85) ತಮ್ಮ ಸ್ವಗೃಹದಲ್ಲಿ ಭಾನುವಾರ ಸಂಜೆ 6.50ಕ್ಕೆ ನಿಧನ ಹೊಂದಿದ್ದಾರೆ.
ಮೃತರು ಪತ್ರಕರ್ತ ಚಿದಾನಂದ ರಿಪ್ಪನ್‌ಪೇಟೆ ಸೇರಿದಂತೆ ಐವರು ಪುತ್ರರು, ಓರ್ವ ಪುತ್ರಿ ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.
ಸಂತಾಪ ;
ಮುರಿಗೆಮ್ಮರ ನಿಧನಕ್ಕೆ ಆನಂದಪುರ ಮುರುಘಾರಾಜೇಂದ್ರಮಠದ ಜಗದ್ಗುರು ಡಾ.ಮಲ್ಲಿಕಾರ್ಜುನ ಮುರುಘಾರಾಜೇಂದ್ರ ಮಹಾಸ್ವಾಮೀದಿ, ಮಳಲಿಮಠದ ಡಾ.ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮೀಜಿ, ಅಖಿಲ ಭಾರತ ವೀರಶೈವ ಮಹಾಸಭಾ ತಾಲ್ಲೂಕು ಘಟಕದ ಅಧ್ಯಕ್ಷ ಎಂ.ಎಸ್.ಉಮೇಶ, ಶ್ರೀಬಸವೇಶ್ವರ ವೀರಶೈವ ಸಮಾಜದ ಉಪಾಧ್ಯಕ್ಷ ದುಂಡರಾಜಪ್ಪಗೌಡ, ಕಾರ್ಯದರ್ಶಿ ಡಿ.ಎಸ್.ರಾಜಾಶಂಕರ, ಎಲ್.ವೈ.ದಾನೇಶಪ್ಪ, ದೇವೇಂದ್ರಪ್ಪಗೌಡ, ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.







