Karnataka Rain | ಮುಂದಿನ 48 ಗಂಟೆಗಳಲ್ಲಿ ರಾಜ್ಯದ 14 ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ !

Written by Malnadtimes.in

Published on:

WhatsApp Group Join Now
Telegram Group Join Now

KARNATAKA RAIN | ಮುಂದಿನ 48 ಗಂಟೆಯಲ್ಲಿ ರಾಜ್ಯದ 14 ಜಿಲ್ಲೆಗಳಲ್ಲಿ ಭಾರೀ ಮಳೆ (Heavy Rain) ಯಾಗುವ ಸಾಧ್ಯತೆ ಇರುವುದರಿಂದ ಈ ಜಿಲ್ಲೆಗಳಿಗೆ ಹವಾಮಾನ ಇಲಾಖೆ (IMD) ಯೆಲ್ಲೋ ಅಲರ್ಟ್‌ ಎಚ್ಚರಿಕೆ ನೀಡಿದೆ.

ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೀದರ್, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ 6 ರಿಂದ 12 ಸೆಂ.ಮೀ.ವರೆಗೆ ಮಳೆಯಾಗುವ ಲಕ್ಷಣ ಇರುವುದರಿಂದ ಈ ಜಿಲ್ಲೆಗಳಿಗೆ ಆ.17 ಹಾಗೂ 18ಕ್ಕೆ ಯೆಲ್ಲೋ ಅಲರ್ಟ್‌ನ ಎಚ್ಚರಿಕೆ ನೀಡಲಾಗಿದೆ.

ಉಳಿದಂತೆ ಬೆಂಗಳೂರು ಸೇರಿ ರಾಜ್ಯದಲ್ಲಿ ಆ.21ರ ವರೆಗೆ ಹಲವು ಕಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕೆಲವು ಕಡೆ ಹೆಚ್ಚಿನ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.

Leave a Comment

error: Content is protected !!