ರಿಪ್ಪನ್ಪೇಟೆ ; ತೀರ್ಥಹಳ್ಳಿ ತಾಲ್ಲೂಕಿನ ಕೋಣಂದೂರು ಸಮೀಪದ ಶ್ರೀಮನ್ ಮಹಾಸಂಸ್ಥಾನ ಮಳಲಿಮಠದಲ್ಲಿ ನವೆಂಬರ್ 4 ರಂದು ಸಂಜೆ 5 ಗಂಟೆಗೆ ಕಾರ್ತಿಕ ದೀಪೋತ್ಸವ ಧರ್ಮಜಾಗೃತಿ ಸಮಾರಂಭವನ್ನು ಬಾಳೆಹೊನ್ನೂರು ರಂಭಾಪುರಿ ಪೀಠದ ಶ್ರೀಮದ್ ರಂಭಾಪುರಿ ವೀರಸಿಂಹಾಸನಾಧೀಶ್ವರ ಶ್ರೀ 1008 ಜಗದ್ಗುರು ಪ್ರಸನ್ನ ರೇಣುಕ ಡಾ.ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರ ದಿವ್ಯ ಸಾನಿಧ್ಯದಲ್ಲಿ ಜರುಗಲಿದೆ ಎಂದು ಮಳಲಿಮಠದ ಡಾ.ಗುರುನಾಗಭೂಷಣ ಶಿವಾಚಾರ್ಯ ಸ್ವಾಮೀಜಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದರು.
ನವೆಂಬರ್ 4 ರಂದು ಸಂಜೆ 5 ಗಂಟೆಗೆ ಕಾರ್ತಿಕ ದೀಪೋತ್ಸವ ಧರ್ಮಜಾಗೃತಿ ಸಮಾರಂಭದ ದಿವ್ಯ ಸಾನಿಧ್ಯವನ್ನು ರಂಭಾಪುರಿ ಪೀಠದ ಶ್ರೀಮದ್ ರಂಭಾಪುರಿ ವೀರಸಿಂಹಾಸನಾಧೀಶ್ವರ ಶ್ರೀ 1008 ಜಗದ್ಗುರು ಪ್ರಸನ್ನ ರೇಣುಕಾ ಡಾ.ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರು ವಹಿಸಿ ಆಶೀರ್ವಚನ ನೀಡುವರು.
ಸಮಾರಂಭದ ಅಧ್ಯಕ್ಷತೆಯನ್ನು ಮಳಲಿಮಠದ ಡಾ.ಗುರುನಾಗಭೂಷಣ ಶಿವಾಚಾರ್ಯ ಸ್ವಾಮಿಜಿ ವಹಿಸುವರು. ಧರ್ಮಜಾಗೃತಿ ಸಮಾರಂಭವನ್ನು ಶಿವಮೊಗ್ಗ ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಉದ್ಘಾಟಿಸುವರು.
ಮುಖ್ಯ ಅತಿಥಿಗಳಾಗಿ ಶಾಸಕರಾದ ಆರಗ ಜ್ಞಾನೇಂದ್ರ, ಎಸ್.ಎನ್.ಚನ್ನಬಸಪ್ಪ, ಗೋಪಾಲಕೃಷ್ಣ ಬೇಳೂರು, ವಿಧಾನಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಆರ್.ಎಂ. ಮಂಜುನಾಥಗೌಡ, ಮಾಜಿ ಸಚಿವ ಕಿಮ್ಮನೆ ರತ್ನಾಕರ್, ಹರತಾಳು ಹಾಲಪ್ಪ, ಅಪ್ಸ್ಕೋಸ್ ಅಧ್ಯಕ್ಷ ಬಿ.ಎ.ಇಂದುಧರ ಗೌಡ, ಶಿವಮೊಗ್ಗ ಶ್ರೀಬಸವೇಶ್ವರ ವೀರಶೈವ ಸಮಾಜದ ಅಧ್ಯಕ್ಷ ಎಸ್.ಎಸ್.ಜ್ಯೋತಿ ಪ್ರಕಾಶ, ಎಸ್.ಪಿ.ದಿನೇಶ, ಕೆ.ಆರ್.ಪ್ರಕಾಶ, ಹೆಚ್.ಎಸ್.ಜಗದೀಶ್, ಬಿ.ಯುವರಾಜ್, ಉಮೇಶ ಮಸರೂರು, ಹೆಚ್.ವಿ.ಈಶ್ವರಪ್ಪಗೌಡ ಭಾಗವಹಿಸುವರು.
ಎಡೆಯೂರು ಕ್ಷೇತ್ರದ ರೇಣುಕ ಶಿವಾಚಾರ್ಯ ಸ್ವಾಮೀಜಿ, ನೇತೃತ್ವ ಬಂಕಾಪುರ ಅರಳೆಲೆ ಹಿರೇಮಠದ ರೇವಣಸಿದ್ದೇಶ್ವರ ಶಿವಾಚಾರ್ಯ ಸ್ವಾಮಿಜಿ ಸಮ್ಮುಖ ಭುವನಗಿರಿ ಕವಲೇದುರ್ಗ ಮಠದ ಮರಳಸಿದ್ದಶಿವಾಚಾರ್ಯ ಸ್ವಾಮೀಜಿಗಳು ಉಪದೇಶಾಮೃತ ನೀಡುವರು.
ನಾಡಿನ ವಿವಿಧ ಮಠದ ಮಠಾಧೀಶರು ಹಾಗೂ ವಿವಿಧ ಕ್ಷೇತ್ರದಲ್ಲಿ ಸಾಧನೆ ಗೈದವರಿಗೆ ಗುರುರಕ್ಷ ನೀಡಲಾಗುವುದೆಂದು ಎಂದು ಮಠದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.







