ಹೊಸನಗರ ; ಮಸಗಲ್ಲಿ ಶಾಲೆ ವಿದ್ಯಾರ್ಥಿನಿ ಸೌಜನ್ಯ ರಾಜ್ಯ ಮಟ್ಟಕ್ಕೆ ಆಯ್ಕೆ

By malnad tech

Published on:

Spread the love

ಹೊಸನಗರ ; ಮಸಗಲ್ಲಿ ಸರ್ಕಾರಿ ಪ್ರೌಢ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಸೌಜನ್ಯ ಇವರು ಗಾಂಧಿ ಜಯಂತಿ ಪ್ರಯುಕ್ತ ವಾರ್ತಾ ಮತ್ತು ಪ್ರಚಾರ ಇಲಾಖೆ ಶಿವಮೊಗ್ಗ ಮತ್ತು ಶಾಲಾ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ಶಿವಮೊಗ್ಗದಲ್ಲಿ ನಡೆಸಿದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ಮಕ್ಕಳ ಭವಿಷ್ಯ ನಿರ್ಮಾಣದಲ್ಲಿ ಗಾಂಧೀಜಿಯವರ ಪಾತ್ರ ಎಂಬ ವಿಷಯದಲ್ಲಿ ಬರೆದ ಪ್ರಬಂಧವು ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದೆ.

ಗುರುವಾರ ಶಿವಮೊಗ್ಗದಲ್ಲಿ ಅಂಬೇಡ್ಕರ್ ಭವನದಲ್ಲಿ ನಡೆದ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿ ಸೌಜನ್ಯರಿಗೆ 3 ಸಾವಿರ ರೂಪಾಯಿ ನಗದು ಮತ್ತು ಪ್ರಮಾಣ ಪತ್ರ ನೀಡಲಾಗಿದ್ದು ರಾಜ್ಯ ಮಟ್ಟದ ಸ್ಪರ್ಧೆಯು ಬೆಂಗಳೂರಿನಲ್ಲಿ ನಡೆಯಲಿದೆ ಮುಂದಿನ ರಾಜ್ಯ ಹಂತದಲ್ಲಿಯೂ ಜಯಶಾಲಿಯಾಗಿ ಹೊಸನಗರ ತಾಲ್ಲೂಕಿಗೆ ಮತ್ತು ಶಿವಮೊಗ್ಗ ಜಿಲ್ಲೆಗೆ ಕೀರ್ತಿತರಲೆಂದು ಮಸಗಲ್ಲಿ ಶಾಲೆಯ ಮುಖ್ಯ ಶಿಕ್ಷಕ ಪರಶುರಾಮಪ್ಪ ಬಿ.ವಿ., ಮಾರ್ಗದರ್ಶನ ನೀಡಿರುವ ಸಹಶಿಕ್ಷಕರಾದ ರವಿಕುಮಾರ್ ಎಂ.ಎಂ, ಶ್ರೀಕಾಂತ ಕೆ.ಕೆ, ಬಸವನಗೌಡ ಹೆಚ್.ಸಿ, ವಾಸಂತಿ ಶಾಂತರಾಮ್, ಕು. ಪೂಜಾ, ಬಾಲಾಜಿ, ಎಸ್‌ಡಿಎಂಸಿ ಅಧ್ಯಕ್ಷ ರಮೇಶ್ ಕೆ.ಆರ್, ಉಪಾಧ್ಯಕ್ಷ ಉಮೇಶ್, ಎಸ್‌ಡಿಎಂಸಿ ಸದಸ್ಯರು ಮತ್ತು ಪೋಷಕರು ಶುಭ ಹಾರೈಸಿದ್ದಾರೆ.

Leave a comment