ಹೊಸನಗರ ; ತಾಲೂಕು ಹರಿದ್ರಾವತಿಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಆಶಯದಲ್ಲಿ ರಾಷ್ಟ್ರೀಯ ಪೋಷಣ್ ಅಭಿಯಾನ ಕಾರ್ಯಕ್ರಮದಲ್ಲಿ ಮಕ್ಕಳಿಗೆ ಹಾಗೂ ಗರ್ಭಿಣಿಯರಿಗೆ ಸೂಕ್ತ ಆರೋಗ್ಯ ಹಾಗೂ ಆಹಾರ ಸೇವನೆ ಬಗ್ಗೆ ಉಪಯುಕ್ತ ಮಾಹಿತಿ ಶಿಬಿರ ಏರ್ಪಡಿಸಲಾಗಿತ್ತು.

ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಕೆ ಪಿ ಮಂಜುನಾಥ್, ಪೋಷಣ್ ಅಭಿಯಾನ ಸಂಯೋಜಕ ಅರವಿಂದ, ಆಯುಷ್ ಆರೋಗ್ಯ ವೈದ್ಯಾಧಿಕಾರಿ ಹರೀಶ್, ಸಖಿ ಕೇಂದ್ರದ ಶೃತಿ, ಪಂಚಾಯತಿ ಅಭಿವೃದ್ಧಿ ಅಧಿಕಾರಿ ರಾಘವೇಂದ್ರ ಕುಶಾಲ್, ಗ್ರಾಮ ಪಂಚಾಯತ್ ಸದಸ್ಯ ಗುರುಮೂರ್ತಿ, ಆರೋಗ್ಯ ನಿರೀಕ್ಷಕ ಶ್ರೀನಿವಾಸ್ ಅಂಜಲಿ ಮತ್ತಿತರರು ಮುಖ್ಯ ಅತಿಥಿಗಳ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕಿ ಬಂಗಾರಮ್ಮ ಇಲಾಖೆಯಿಂದ ದೊರಕುವ ಸೌಲಭ್ಯಗಳು ಅದರ ಬಳಕೆ ಮಹಿಳಾ ಮತ್ತು ಮಕ್ಕಳ ಆರೋಗ್ಯ ಬಗ್ಗೆ ಸೂಕ್ತ ಮಾಹಿತಿ ನೀಡಿದರು.
ನವ್ಯ ಪ್ರಾರ್ಥಿಸಿದರು. ಪುಷ್ಪ ಸ್ವಾಗತಿಸಿದರು. ಜಿ ಶಕುಂತಲಾ ಕಾರ್ಯಕ್ರಮ ನಿರೂಪಿಸಿದರು. ಅರವಿಂದ ಪ್ರಾಥಮಿಕವಾಗಿ ಪ್ರಸ್ತಾವಿಕವಾಗಿ ಮಾತನಾಡಿದರು.

ಈ ಸಂದರ್ಭದಲ್ಲಿ ಗರ್ಭಿಣಿಯರಿಗೆ ಸೀಮಂತ ಹಾಗು ಮಕ್ಕಳಿಗಾಗಿ ಅನ್ನಪ್ರಾಶನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ರಚಿತ ಶ್ರೀಪಾದ್ ವಂದಿಸಿದರು.