ಶಿವಮೊಗ್ಗ : ಬಂಧಿಸಲು ತೆರಳಿದ್ದ ಪೊಲೀಸರ (Police) ಮೇಲೆ ಹಲ್ಲೆಗೆ ಯತ್ನಿಸಿದ ರೌಡಿಶೀಟರ್ ಶೋಹಿಬ್ ಕಾಲಿಗೆ ಪೊಲೀಸರು ಗುಂಡು (Firing) ಹಾರಿಸಿದ ಘಟನೆ ಬೀರನಕೆರೆ ಬಳಿ ಘಟನೆ ನಡೆದಿದೆ.
ಶಿವಮೊಗ್ಗದಲ್ಲಿ ನಡೆದಿದ್ದ ತ್ರಿಬಲ್ ಮರ್ಡರ್ ಪ್ರಕರಣಕ್ಕೆ ಸಂಬಂಧಿಸಿ ರೌಡಿಶೀಟರ್ ಶೋಹಿಬ್ ನನ್ನು ಬಂಧಿಸಲು ಬೀರನಕೆರೆಗೆ ಹೋದ ಪಿಎಸ್ಐ ಕುಮಾರ್ ಹಾಗೂ ಹೆಡ್ ಕಾನ್ಸ್ಟೇಬಲ್ ಅಣ್ಣಪ್ಪ ಮೇಲೆ ಶೋಹಿಬ್ ಹಲ್ಲೆಗೆ ಯತ್ನಿಸಿದ್ದಾನೆ ಈ ವೇಳೆ ಪೊಲೀಸರು ಶೋಹಿಬ್ ಕಾಲಿಗೆ ಗುಂಡು ಹಾರಿಸಿದ್ದಾರೆ.
ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಘಟನೆ ನಡೆದಿದ್ದು ಸದ್ಯ ಶೋಹಿಬ್ ಪೊಲೀಸರ ವಶದಲ್ಲಿದ್ದಾನೆ.