ವಿಧಾನ ಪರಿಷತ್ ಅಭ್ಯರ್ಥಿಗಳ ಪರ ಭಾರತೀ ಶೆಟ್ಟಿ ಮತಯಾಚನೆ

Written by Malnadtimes.in

Published on:

WhatsApp Group Join Now
Telegram Group Join Now

ಸೊರಬ: ರಾಜ್ಯದಲ್ಲಿ ಪದವೀಧರರು ಹಾಗೂ ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸುವುದು ಬಿಜೆಪಿ ಮಾತ್ರ. ಈ ನಿಟ್ಟಿನಲ್ಲಿ ನೈರುತ್ಯ ಪದವೀಧರರ ಕ್ಷೇತ್ರದ ಅಭ್ಯರ್ಥಿ ಡಾ. ಧನಂಜಯ ಸರ್ಜಿ (Dr. Dhananjaya Sarji) ಹಾಗೂ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಭೋಜೇಗೌಡ (Bhojegowda) ಅವರನ್ನು ಬೆಂಬಲಿಸುವಂತೆ ವಿಧಾನ ಪರಿಷತ್ ಸದಸ್ಯೆ ಭಾರತೀ ಶೆಟ್ಟಿ (Bharathi Shetty) ವಿನಂತಿಸಿದರು.

ಪಟ್ಟಣದ ವಕೀಲರ ಭವನದಲ್ಲಿ ಮುಂಭಾಗದಲ್ಲಿ ಮಂಗಳವಾರ ವಿಧಾನಪರಿಷತ್ ಅಭ್ಯರ್ಥಿಗಳ ಪರವಾಗಿ ಮತಯಾಚನೆ ನಡೆಸಿ ಮಾತನಾಡಿದ ಅವರು, ಡಾ. ಧನಂಜಯ ಸರ್ಜಿ ಕೋವಿಡ್ ಸಂದರ್ಭದಲ್ಲಿ ಅನೇಕ ರೀತಿಯಲ್ಲಿ ಸೇವೆ ಸಲ್ಲಿಸಿದ್ದಾರೆ. ಸಮಾಜ ಸೇವೆ ಜೊತೆಯಲ್ಲಿ ವೈದ್ಯಕೀಯ ಸೇವೆಯನ್ನು ಮಾಡುತ್ತಿರುವ ಡಾ. ಸರ್ಜಿ ಅವರು ಸೂಕ್ತ ಅಭ್ಯರ್ಥಿಯಾಗಿದ್ದು, ಈ ನಿಟ್ಟಿನಲ್ಲಿ ಪದವೀಧರರು ಅವರನ್ನು ಬೆಂಬಲಿಸಬೇಕು. ಸಂಘ-ಪರಿವಾರದ ಹಿನ್ನೆಲೆಯಿಂದ ಬಂದ ಸರ್ಜಿ ಅವರು ಅನೇಕ ಜವಾಬ್ದಾರಿಗಳನ್ನು ನಿರ್ವಹಿಸಿದ್ದಾರೆ. ವೈದ್ಯಕೀಯ ಶಿಕ್ಷಣದ ಅವಧಿಯಲ್ಲಿಯೂ ಸಂಘದ ಮಾರ್ಗದರ್ಶನದಂತೆ ಕಾರ್ಯನಿರ್ವಹಿಸಿದ್ದಾರೆ ಎಂದರು.

ಕಳೆದ 10 ವರ್ಷಗಳಿಂದ ದೇಶ ಅಭಿವೃದ್ಧಿ ಪಥದತ್ತ ಸಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿಯವರು ದೇಶವನ್ನು ವಿಶ್ವ ಗುರುವನ್ನಾಗಿಸುವ ನಿಟ್ಟಿನಲ್ಲಿ ಶ್ರಮವಹಿಸುತ್ತಿದ್ದಾರೆ. ಇದೇ ಹಾದಿಯಲ್ಲಿ ಡಾ. ಧನಂಜಯ ಸರ್ಜಿ ಮತ್ತು ಭೋಜೇಗೌಡ ಅವರನ್ನು ಬೆಂಬಲಿಸಬೇಕಿದೆ. ಪದವೀಧರರು ಮತ್ತು ಶಿಕ್ಷಕರ ಸಮಸ್ಯೆಗಳನ್ನು ಸಮೀಪದಲ್ಲಿ ಕಂಡಿರುವ ಅಭ್ಯರ್ಥಿಗಳನ್ನೇ ಪಕ್ಷ ಕಣಕ್ಕೆ ಇಳಿಸಿದೆ. ಲೋಕಸಭಾ ಚುನಾವಣೆಯಲ್ಲಿಯೂ ಶಿವಮೊಗ್ಗ ಕ್ಷೇತ್ರದಿಂದ ಬಿ.ವೈ. ರಾಘವೇಂದ್ರ ಅವರು ಅತ್ಯಧಿಕ ಬಹುಮತದಿಂದ ಜಯಗಳಿಸಲಿದ್ದಾರೆ. ಪ್ರಜ್ಞಾವಂತ ಮತದಾರರು ಬಿಜೆಪಿ ಅಭ್ಯರ್ಥಿಗಳನ್ನು ಬೆಂಬಲಿಸುವಂತೆ ಮನವಿ ಮಾಡಿದ ಅವರು, ವಿಧಾನ ಪರಿಷತ್ ಚುನಾವಣೆಯಲ್ಲಿಯೂ ಬಿಜೆಪಿ ಅಭ್ಯರ್ಥಿಗಳೇ ಜಯ ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಪುರಸಭೆ ಸದಸ್ಯ ಮಧುರಾಯ್ ಜಿ. ಶೇಟ್, ಬಿಜೆಪಿ ತಾಲೂಕು ಅಧ್ಯಕ್ಷ ಪ್ರಕಾಶ್ ತಲಕಾಲಕೊಪ್ಪ, ಹಿರಿಯರಾದ ಎಚ್.ಎಸ್. ಮಂಜಪ್ಪ, ಬಿಜೆಪಿ ಯುವ ಮೋರ್ಚಾ ಜಿಲ್ಲಾ ಕಾರ್ಯದರ್ಶಿ ಹಾಗೂ ವಕೀಲ ಆಶೀಕ್ ನಾಗಪ್ಪ, ಟೌನ್ ಅಧ್ಯಕ್ಷ ಅಶೋಕ್ ಶೇಟ್, ವಕೀಲರ ಸಂಘದ ಅಧ್ಯಕ್ಷ ಸಿ.ವೈ. ಅಶೋಕ್ ಯಂಕೇನ್, ಹಿರಿಯ ವಕೀಲರಾದ ನಾಗಪ್ಪ, ಎಂ.ಆರ್. ಪಾಟೀಲ್, ಡಾಕಪ್ಪ ಹೆಸರಿ, ಚಂದ್ರಶೇಖರ್ ಬಾರಂಗಿ, ಗುರುಸ್ವಾಮಿ, ಡಿ. ಶಿವಯೋಗಿ, ರಂಗನಾಥ ಚಕ್ರಪಾಣಿ, ಶಾಂಭವಿ, ಸಾಜೀಯಾ, ರಾಜಕುಮಾರ್, ಪ್ರಶಾಂತ್ ಸೇರಿದಂತೆ ಇತರರಿದ್ದರು.

Leave a Comment

error: Content is protected !!