ವ್ಯಾಪಕ ಮಳೆ ಹಿನ್ನೆಲೆ, ಹೊಸನಗರ ತಾಲೂಕಿನಾದ್ಯಂತ ಶಾಲಾ – ಕಾಲೇಜುಗಳಿಗೆ ಮುಂದುವರೆದ ರಜೆ !

Written by Malnadtimes.in

Published on:

WhatsApp Group Join Now
Telegram Group Join Now

HOSANAGARA | ವ್ಯಾಪಕ ಮಳೆ ಹಿನ್ನೆಲೆಯಲ್ಲಿ ಹೊಸನಗರ ತಾಲೂಕಿನಾದ್ಯಂತ ಶಾಲೆ, ಕಾಲೇಜುಗಳಿಗೆ ರಜೆ ಮುಂದುವರೆದಿದ್ದು ಜು.19 ರಂದು ರಜೆ ನೀಡಿ ತಹಶೀಲ್ದಾರ್‌ ರಶ್ಮಿ ಹಾಲೇಶ್ ಆದೇಶಿಸಿದ್ದಾರೆ.

ಹೊಸನಗರ ತಾಲ್ಲೂಕಿನಲ್ಲಿ ತೀವ್ರ ಮಳೆಯಾಗುತ್ತಿದ್ದು, ಮುಂದಿನ ದಿನಗಳಲ್ಲಿ ಹೆಚ್ಚಿನ ಮಳೆಯಾಗುವ ಮುನ್ಸೂಚನೆಯಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ತಾಲ್ಲೂಕಿನಾದ್ಯಂತ ಜು. 19 ರಂದು ಎಲ್ಲಾ ಅಂಗನವಾಡಿ ಕೇಂದ್ರಗಳು, ಶಾಲಾ – ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಹಾಗೂ ರಜೆ ದಿನದಂದು ನಡೆಯಬೇಕಾಗಿದ್ದ ಪಾಠ ಪ್ರವಚನಗಳನ್ನು ಮುಂದಿನ ರಜೆ ದಿನಗಳಲ್ಲಿ ನಡೆಸಿ ಹೊಂದಾಣಿಕೆ ಮಾಡಿಕೊಳ್ಳಲು ಆದೇಶಿಸಲಾಗಿದೆ ಎಂದು ತಹಶೀಲ್ದಾರ್‌ ರಶ್ಮಿ ತಿಳಿಸಿದ್ದಾರೆ.

Leave a Comment

error: Content is protected !!