ಸರ್ಕಾರಿ ನೌಕರರ ಬೇಡಿಕೆ ಈಡೇರಿಸದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಅನಿವಾರ್ಯ ; ಸರ್ಕಾರಕ್ಕೆ ಖಡಕ್ ಎಚ್ಚರಿಕೆ

Written by Malnadtimes.in

Published on:

WhatsApp Group Join Now
Telegram Group Join Now

HOSANAGARA | ಈ ಬಾರಿ ನಡೆಯುವ ವಿಧಾನಸಭೆಯ ಕಲಾಪದಲ್ಲಿ ಸರ್ಕಾರಿ ನೌಕರರ ಹತ್ತು ಹಲವು ಬೇಡಿಕೆಗಳನ್ನು ಸರ್ಕಾರ ಈಡೇರಿಸದಿದ್ದರೆ ಮುಂದಿನ ದಿನದಲ್ಲಿ ಸರ್ಕಾರದ ವಿರುದ್ಧ ಉಗ್ರ ಹೋರಾಟ ನಡೆಸುವುದಾಗಿ ಹೊಸನಗರ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಸವಣ್ಯಪ್ಪ ಎಚ್ಚರಿಕೆ ನೀಡಿದ್ದಾರೆ.

ಇಲ್ಲಿನ ತಾಲ್ಲೂಕು ಕಛೇರಿಯ ಮುಂಭಾಗ ಹೊಸನಗರ ತಾಲ್ಲೂಕಿನ ರಾಜ್ಯ ಸರ್ಕಾರಿ ನೌಕರರು ತಹಶೀಲ್ದಾರ್ ರಶ್ಮಿ ಹಾಲೇಶ್‌ರವರಿಗೆ ಮನವಿ ಪತ್ರ ಸಲ್ಲಿಸಿ ಮಾತನಾಡಿದರು.

ಸರ್ಕಾರದ ಕಾರ್ಯಕ್ರಮಗಳನ್ನು ಸಮಾಜದ ಕಟ್ಟ ಕಡೆಯ ವ್ಯಕ್ತಿಗೆ ತಲುಪಿಸುವ ಕೆಲಸ ಮಾಡುತ್ತಿರುವ ಸರ್ಕಾರಿ ನೌಕರರ ಬೇಡಿಕೆ ಈಡೇರಿಸಲು ಮೀನಾ-ಮೇಷ ಮಾಡುತ್ತಿರುವ ಸರ್ಕಾರದ ನಡೆ ಖಂಡನಾರ್ಹ ಕರ್ನಾಟಕ ಸರ್ಕಾರಿ ನೌಕರರ ಬೇಡಿಕೆ ಈಡೇರಿಸಲು 7ನೇ ವೇತನ ಆಯೋಗ ಜಾರಿಯಾಗಿ ವರದಿ ನೀಡಿ 4 ತಿಂಗಳು ಕಳೆದಿದೆ. ಈ ಹಿಂದೆ ನೌಕರರ ಸಂಘವು ಸರ್ಕಾರಕ್ಕೆ ಮನವಿ ಮಾಡಿದಾಗ ನೀತಿ ಸಂಹಿತೆ ಮುಗಿಯಲಿ ಎಂದಿತ್ತು. ಆದರೆ ಸರ್ಕಾರವು 7ನೇ ವೇತನ ಪರಿಷ್ಕರಣೆಗೆ ವಿಳಂಬವಾಗುತ್ತಿರುವ ಪರಿಣಾಮ ನೌಕರರಲ್ಲಿ ಆತಂಕಕ್ಕೆ ಕಾರಣವಾಗಿದೆ‌. ಹೀಗಾಗಿ ಸಾಮಾಜಿಕ ಜಾಲತಾಣದಲ್ಲಿ ಸರ್ಕಾರ ಹಾಗೂ ಸಂಘಟನೆಯ ವಿರುದ್ಧ ಅಸಮಾದಾನ ವ್ಯಕ್ತವಾಗುತ್ತಿದೆ ಎಂದ ಅವರು, ರಾಜ್ಯ ಸರ್ಕಾರ ಜಾರಿಗೆ ತರುವ ಜನಪರ ಕಾರ್ಯಕ್ರಮ ಯಶಸ್ವಿಯಾಗಿ ಜಾರಿಗೆ ತರಲು ಹಾಗೂ ಅರ್ಹ ಫಲಾನುಭವಿಗಳಿಗೆ ತಲುಪಿಸಲು ಸರ್ಕಾರಿ ನೌಕರರು ಹಗಲಿರುಳು ಶ್ರಮಿಸುತ್ತಿದ್ದಾರೆ ರಾಜ್ಯದ ವಿವಿಧ ಹುದ್ದೆಗಳಲ್ಲಿ 2.60 ಲಕ್ಷ ನೌಕರರು ಕೆಲಸವನ್ನು ಹಾಲಿ ನೌಕರರು ಕೆಲಸ ನಿರ್ವಹಿಸುತ್ತಿರುವುದರಿಂದ ಸರ್ಕಾರಕ್ಕೆ ಅಂದಾಜು 85 ಕೋಟಿ ರೂ. ಉಳಿತಾಯವಾಗುತ್ತಿದೆ. ನಮ್ಮ ಸರ್ಕಾರಿ ನೌಕರರು ಪ್ರತಿದಿನ ಒತ್ತಡದಲ್ಲಿ ಕೆಲಸ ನಿರ್ವಹಿಸುವ ಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಸರ್ಕಾರಿ ನೌಕರರು ಅವಲಂಬಿತ ಕುಟುಂಬದ ಸದಸ್ಯರಿಗೆ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ಜಾರಿಗೆ ತರಬೇಕೆಂದರು.

ಗಟ್ಟಿಮುಟ್ಟಿದ್ದಾಗ ದುಡಿಸಿಕೊಳ್ಳುತ್ತಿದೆ :

ಸರ್ಕಾರ ನೌಕರನನ್ನು ಗಟ್ಟಿ ಮುಟ್ಟಿದ್ದಾಗ ದುಡಿಸಿಕೊಳ್ಳುತ್ತಿದೆ. ಮುಪ್ಪಿನ ಕಾಲದಲ್ಲಿ ಕೈ ಬಿಡುವ ಯೋಜನೆ ಸರ್ಕಾರದ್ದಾಗಿದೆ. ಹೀಗಾಗಿ ಮುಪ್ಪಿನ ವಯಸ್ಸಿನಲ್ಲಿ ನೌಕರರು ತುತ್ತು ಅನ್ನಕ್ಕಾಗಿ ಪರದಾಟ ಮಾಡುವ ಸ್ಥಿತಿ ಬರಬಾರದು ಎನ್ನುವ ಆಶಯ ಸರ್ಕಾರಕ್ಕೆ ಇದ್ದರೆ ತಕ್ಷಣವೇ ಎನ್‌ಪಿಎಸ್ ಹೋಗಲಾಡಿಸಿ ಒಪಿಎಸ್ ಜಾರಿ ಮಾಡಲು ಮುಂದಾಗಬೇಕು. ಇಲ್ಲವಾದರೆ ಮುಂದಿನ ದಿನದಲ್ಲಿ ರಾಜ್ಯ ಸರ್ಕಾರಿ ನೌಕರರಿಂದ ಉಗ್ರ ಹೋರಾಟ ಅನಿರ್ವಾಯ ಎಂದರು.

ಈ ಮನವಿ ಪತ್ರ ನೀಡುವ ಸಂದರ್ಭದಲ್ಲಿ ಹೊಸನಗರ ತಾಲ್ಲೂಕು ನೌಕರರ ಸಂಘದ ಖಜಾಂಚಿ ಪ್ರಭಾಕರ್, ರಾಜ್ಯ ಪರಿಷತ್ ಸದಸ್ಯ ಸುದೀಂದ್ರಕುಮಾರ್, ಗೌರವಾಧ್ಯಕ್ಷ ಜಗದೀಶ್ ಕಾಗಿನೆಲೆ, ಪ್ರಾಂಶುಪಾಲರಾದ ಸ್ವಾಮಿರಾವ್, ಗ್ರೇಡ್ 2 ತಹಶೀಲ್ದಾರ್‌ ರಾಕೇಶ್, ರೇಣುಕೇಶ್, ಶಿಕ್ಷಕರ ಸಂಘದ ಅಧ್ಯಕ್ಷ ಹೆಚ್.ಆರ್ ಸುರೇಶ್, ಶಿಕ್ಷಕರ ಸಂಘದ ಕಾರ್ಯದರ್ಶಿ ಆಲ್ತಾಫ್, ರೇಣುಕಯ್ಯ, ಕಟ್ಟೆ ಮಂಜುನಾಥ್, ಅಕ್ಷರ ದಾಸೋಹ ನಾಗರಾಜ್, ಪ್ರಥಮ ದರ್ಜೆ ಗುಮಾಸ್ಥರಾದ ಚಿರಾಗ್, ಈಶ್ವರ್ ಫಟಗಾರ್, ಲಿಲ್ಲಿ ಡಿಸೋಜ, ಸುಮನ, ಅನಿತಾ, ಆಹಾರ ಇಲಾಖೆಯ ನಾಗರಾಜ್, ಶಿವಪ್ಪ ನಾಗರಾಜ್ ಕಿಣಿ, ರಾಘವೇಂದ್ರ, ಶಿಕ್ಷಣ ಇಲಾಖೆಯ ಮನು, ತಾಲ್ಲೂಕು ಕಛೇರಿಯ ಎಲ್ಲ ಸಿಬ್ಬಂದಿಗಳು, ಸಾರ್ವಜನಿಕ ಆಸ್ಪತ್ರೆಯ ಸಿಬ್ಬಂದಿಗಳು, ಬಿ.ಇ.ಓ ಕಛೇರಿಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

Leave a Comment

error: Content is protected !!