ಓವರ್‌ಟೇಕ್ ಮಾಡುವ ಭರದಲ್ಲಿ ಮರಕ್ಕೆ ಡಿಕ್ಕಿ ಹೊಡೆದ ಖಾಸಗಿ ಬಸ್ !

Written by Malnadtimes.in

Published on:

WhatsApp Group Join Now
Telegram Group Join Now

ತೀರ್ಥಹಳ್ಳಿ : ಓವರ್‌ಟೇಕ್ (Overtake) ಮಾಡುವ ಭರದಲ್ಲಿ ಖಾಸಗಿ ಬಸ್‌ವೊಂದು (Bus) ಮರಕ್ಕೆ (Tree) ಡಿಕ್ಕಿ ಹೊಡೆದ ಘಟನೆ ತೀರ್ಥಹಳ್ಳಿ-ಶಿವಮೊಗ್ಗ (Shivamogga – Thirthahalli) ನಡುವಿನ ರಾಷ್ಟ್ರೀಯ ಹೆದ್ದಾರಿಯ ಮಂಡಗದ್ದೆ (Mandagadde) ಸಮೀಪ ಮಂಗಳವಾರ ನಡೆದಿದೆ.

ಕಳಸದಿಂದ ಶಿವಮೊಗ್ಗಕ್ಕೆ ಹೋಗುತ್ತಿದ್ದ ಖಾಸಗಿ ಬಸ್‌ ಮಂಡಗದ್ದೆಯ 15ನೇ ಮೈಲಿಕಲ್ಲಿನ ಬಳಿ ಬಸ್‌ ಚಾಲಕ ಎದುರಿಗೆ ಸಾಗುತ್ತಿದ್ದ ವಾಹನವನ್ನ ಓವರ್‌ಟೇಕ್‌ ಮಾಡಲು ಮುಂದಾಗಿದ್ದಾನೆ. ಈ ವೇಳೆ ಆತನ ನಿಯಂತ್ರಣ ತಪ್ಪಿದ ಬಸ್‌ ಇನ್ನೊಂದು ವಾಹನಕ್ಕೆ ಡಿಕ್ಕಿಯಾಗಿ ರಸ್ತೆ ಪಕ್ಕದ ಮರವೊಂದಕ್ಕೆ ಗುದ್ದಿದೆ.

ಘಟನೆಯಲ್ಲಿ ಓರ್ವ ಮಹಿಳೆ ಹಾಗೂ ಓರ್ವ ಮಗು ಸೇರಿದಂತೆ ಕೆಲವರಿಗೆ ಗಾಯಗಳಾಗಿವೆ. ಇಬ್ಬರ ಪರಿಸ್ಥಿತಿ ಗಂಭೀರವಾಗಿ ಎನ್ನಲಾಗಿದೆ. ಇನ್ನೂ ಘಟನೆಯಲ್ಲಿ ಬಸ್‌ನ ಮುಂಭಾಗ ಬಹುತೇಕ ನುಜ್ಜುಗುಜ್ಜಾಗಿದೆ.

Leave a Comment

error: Content is protected !!