Rain Damage | ಭಾರಿ ಗಾಳಿ ಮಳೆಗೆ ಅಡಿಕೆ ತೋಟದ ಮೇಲೆ ಮರ ಬಿದ್ದು ಅಪಾರ ಹಾನಿ

Written by Malnadtimes.in

Updated on:

WhatsApp Group Join Now
Telegram Group Join Now

ರಿಪ್ಪನ್‌ಪೇಟೆ: ಭಾರಿ ಗಾಳಿ, ಮಳೆಗೆ ಬೃಹತ್ ಮರವೊಂದು ಉರುಳಿ ಬಿದ್ದ ಪರಿಣಾಮ ಅಡಿಕೆ ತೋಟಕ್ಕೆ ಹಾನಿ ಉಂಟಾದ ಘಟನೆ ಹುಂಚ ಹೋಬಳಿಯ ಕೋಡೂರು ಗ್ರಾಪಂ ವ್ಯಾಪ್ತಿಯ ಹೆಚ್ ಕುನ್ನೂರು ಗ್ರಾಮದಲ್ಲಿ ಗುರುವಾರ ನಡೆದಿದೆ.

Rain Damage

Rain Damage
Rain Damage

ಗೋಪಮ್ಮ ಕೋಂ ಹೂವಣ್ಣ ಎಂಬುವವರಿಗೆ ಸೇರಿದ ಸ.ನಂ 10ರ 3.12 ಎಕರೆ ವಿಸ್ತೀರ್ಣದ ಅಡಿಕೆ ತೋಟದ ಮೇಲೆ ಬೃಹತ್ ಗಾತ್ರದ ಮರವೊಂದು ಉರುಳಿ ಬಿದ್ದಿದ್ದು ಈ ಘಟನೆಯಲ್ಲಿ 50ಕ್ಕೂ ಅಧಿಕ ಫಸಲು ಬರುವ ಅಡಿಕೆ ಮರಗಳು ಧರಾಶಾಹಿಯಾಗಿದೆ. ಇದರಿಂದ ಲಕ್ಷಾಂತರ ರೂ. ನಷ್ಟ ಸಂಭವಿಸಿದೆ ಎಂದು ತಿಳಿದುಬಂದಿದೆ.

ಅಡಿಕೆ ಮರದ ಮೇಲೆ ಬಿದ್ದ ಮತ್ತಿಮರದಿಂದ ತೋಟದ ಯಜಮಾನನಿಗೆ ನಷ್ಟ ಉಂಟಾಗಿದ್ದು ಹೊಸನಗರ ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಮೌಳಿ ಗೌಡ ಹಾನಿಗೊಳಗಾದ ತೋಟಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ನಷ್ಟದ ಬಗ್ಗೆ ಸರ್ಕಾರದ ಹಾಗೂ ತಹಶೀಲ್ದಾರ್‌ ಗಮನಕ್ಕೆ ತಂದು ಸರ್ಕಾರದಿಂದ ಪ್ರಾಕೃತಿಕ ವಿಕೋಪದಡಿ ಪರಿಹಾರ ಕೊಡಿಸುವುದಾಗಿ ಭರವಸೆ ನೀಡಿದ್ದಾರೆ.

ಇನ್ನೂ ನಿನ್ನೆ ಮಧ್ಯಾಹ್ನ ಶಿವಮೊಗ್ಗ ಜಿಲ್ಲೆಯ ಸಾಗರ, ಹೊಸನಗರ, ತೀರ್ಥಹಳ್ಳಿ, ಶಿಕಾರಿಪುರ, ಸೊರಬ, ಶಿವಮೊಗ್ಗ ತಾಲೂಕಿನ ಹಲವೆಡೆ ಬಿರುಗಾಳಿ ಸಹಿತ ಧಾರಾಕಾರವಾಗಿ ಮಳೆ ಸುರಿದಿದ್ದು ಹಲವೆಡೆ ಮರಗಳು ಧರೆಗುರುಳಿದ್ದು ವಿದ್ಯುತ್ ಸಂಪರ್ಕ ಸಹ ಕಡಿತಗೊಂಡಿದೆ.

ಕೆಲವು ದಿನಗಳಿಂದ ಕುಡಿಯುವ ನೀರಿಗೂ ಈ ಭಾಗದಲ್ಲಿ ಹಾಹಾಕಾರ ಎದುರಾಗಿತ್ತು. ವರ್ಷಧಾರೆ ಜನರಲ್ಲಿ ಸಂಭ್ರಮ ತಂದಿದೆ.

Read More

Leave a Comment

error: Content is protected !!