ರಿಪ್ಪನ್‌ಪೇಟೆ ; ಮಕ್ಕಳ ತಜ್ಞ ಡಾ.ಹಮೀದ್ ನಿಧನ !

Written by Malnadtimes.in

Published on:

WhatsApp Group Join Now
Telegram Group Join Now

RIPPONPETE | ಇಲ್ಲಿನ ಹೊಸನಗರ ರಸ್ತೆಯಲ್ಲಿನ ಮದನಿ ಕ್ಲಿನಿಕ್‌ನ ವೈದ್ಯ ಡಾ. ಆರ್. ಹಮೀದ್ (90) ಇಂದು ಬೆಳಗ್ಗೆ ತಮ್ಮ ಸ್ವಗೃಹದಲ್ಲಿ ನಿಧನ ಹೊಂದಿದ್ದಾರೆ.

ಸುತ್ತಮುತ್ತಲಿನ ಜನರಿಗೆ ಬಹು ಪರಿಚಿತರಾದ ಹಾಗೂ ಅನೇಕ ರೋಗಿಗಳ ಪಾಲಿನ ಆಪದ್ಬಾಂಧವರಾಗಿದ್ದ ಇವರ ನಿಧನ ಸಾರ್ವಜನಿಕರಿಗೆ ತುಂಬಲಾರದ ನಷ್ಟವಾಗಿದೆ.

ಸದಾಬಡವರ ಬಗ್ಗೆ ಅಪಾರ ಕಾಳಜಿ ಹೊಂದಿದ್ದ ಹಾಗೂ ತಮ್ಮ ಜೀವಮಾನವೀಡಿ ಸ್ವಾವಲಂಬಿಯಾಗಿ ಬದುಕಿ ಸಾಧಿಸಿ ತೋರಿಸಿದ ಇವರು ಇಬ್ಬರು ಪುತ್ರರು, ನಾಲ್ವರು ಪುತ್ರಿಯರನ್ನು ಅಗಲಿದ್ದಾರೆ.

ಮೃತರ ಅಂತ್ಯಕ್ರಿಯೆ ಇಂದು ಸಂಜೆ ಸಾಗರ ರಸ್ತೆಯಲ್ಲಿರುವ ಖಬರ್‌ಸ್ಥಾನದಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲದವರು ತಿಳಿಸಿದರು.

Leave a Comment

error: Content is protected !!