ವಿಧಾನ ಪರಿಷತ್ ಚುನಾವಣೆ, ಕಾಂಗ್ರೆಸ್ ಅಭ್ಯರ್ಥಿಗಳ ಪರ ಶಾಸಕ ಬೇಳೂರು ಮತಯಾಚನೆ

Written by Malnadtimes.in

Published on:

WhatsApp Group Join Now
Telegram Group Join Now

ರಿಪ್ಪನ್‌ಪೇಟೆ: ಜೂನ್ 3 ರಂದು ನಡೆಯುವ ವಿಧಾನ ಪರಿಷತ್ ನೈರುತ್ಯ ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಾದ ಆಯನೂರು ಮಂಜುನಾಥ (Ayanuru Manjunath) ಮತ್ತು ಕೆ.ಕೆ.ಮಂಜುನಾಥ (K.K. Manjunath) ಪರ ಶಾಸಕ ಹಾಗೂ ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ (Beluru Gopalakrishna) ಮತದಾರರನ್ನು ಭೇಟಿ ಮಾಡಿ ಮತಯಾಚಿಸಿದರು.

ನಂತರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದು ಸಾಕಷ್ಟು ಜನಪರ ಯೋಜನೆಗಳನ್ನು ಅನುಷ್ಟಾನಗೊಳಿಸುವ ಮೂಲಕ ಬಡವರ ಪಕ್ಷವಾಗಿ ಜನಸಾಮಾನ್ಯರಿಗೆ ಯೋಜನೆಯ ಸೌಲಭ್ಯವನ್ನು ನೇರವಾಗಿ ತಲುಪಿಸುವ ಕಾರ್ಯಗಳನ್ನು ಮಾಡಲಾಗುತ್ತಿದ್ದು ಅಲ್ಲದೆ ಕ್ಷೇತ್ರದ ವ್ಯಾಪ್ತಿಯಲ್ಲಿ ಅಭಿವೃದ್ದಿಗೆ ಹೆಚ್ಚು ಒತ್ತು ನೀಡಿ ಅಭಿವೃದ್ದಿ ಪಡಿಸಲಾಗುತ್ತಿದೆ. ಅದರಂತೆ ವಿಧಾನ ಪರಿಷತ್ ‘ಚಿಂತಕರ ಛಾವಡಿ’ ಬುದ್ದಿವಂತರನ್ನೇ ಹೆಚ್ಚು ಹೊಂದಿರುವ ಪರಿಷತ್‌ಗೆ ಜನಾನುರಾಗಿ ಆನುಭವಿಗಳ ಅಗತ್ಯತೆ ಇರುವ ಕ್ಷೇತ್ರಕ್ಕೆ ಆಯನೂರು ಮಂಜುನಾಥ ಮತ್ತು ಶಿಕ್ಷಕರ ಕ್ಷೇತ್ರದ ಕೆ.ಕೆ.ಮಂಜುನಾಥ್ ಅಂತವರನ್ನು ಬೆಂಬಲಿ ಕಳುಹಿಸಿದರೆ ಪದವೀಧರರ ಮತ್ತು ಶಿಕ್ಷಕರ ಹಲವು ಸಮಸ್ಯೆಗಳಿಗೆ ಪರಿಷತ್‌ನಲ್ಲಿ ಧ್ವನಿ ಎತ್ತುವ ಮೂಲಕ ಪರಿಹಾರ ಕಂಡುಕೊಳ್ಳುವಂತಹ ನಾಯಕತ್ವ ಹೊಂದಿರುವವರಿಗೆ ಮತಹಾಕಿ ಗೆಲ್ಲಿಸಿ ಎಂದು ಮತದಾರರಲ್ಲಿ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷ  ಕಲಗೋಡು ರತ್ನಾಕರ್, ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯ ರಾಮಚಂದ್ರ, ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಜಿ.ಚಂದ್ರಮೌಳಿ, ಗ್ರಾಮ ಪಂಚಾಯತಿ ಅಧ್ಯಕ್ಷೆ ಧನಲಕ್ಷಿ, ಕಾಂಗ್ರೆಸ್  ಪಕ್ಷದ ಸ್ಥಳೀಯ ಮುಖಂಡರು ಕಾರ್ಯಕರ್ತರು ಹಾಜರಿದ್ದರು.

Leave a Comment

error: Content is protected !!