Accident | ನಿಂತಿದ್ದ ಟಿಪ್ಪರ್ ಲಾರಿಗೆ ಹಿಂಬದಿಯಿಂದ ಗದ್ದಿದ ಕ್ಯಾಂಟರ್, ಓರ್ವ ಸ್ಥಳದಲ್ಲೇ ಸಾವು, ಚಾಲಕನ ಸ್ಥಿತಿ ಗಂಭೀರ !

Written by Malnadtimes.in

Published on:

WhatsApp Group Join Now
Telegram Group Join Now

ನಿಂತಿದ್ದ ಟಿಪ್ಪರ್ ಲಾರಿಗೆ ಹಿಂಬದಿಯಿಂದ ಗದ್ದಿದ ಕ್ಯಾಂಟರ್, ಓರ್ವ ಸ್ಥಳದಲ್ಲೇ ಸಾವು, ಚಾಲಕನ ಸ್ಥಿತಿ ಗಂಭೀರ !

ತೀರ್ಥಹಳ್ಳಿ : ನಿಂತಿದ್ದ ಟಿಪ್ಪರ್ ಲಾರಿಗೆ ಹಿಂಬದಿಯಿಂದ ಕ್ಯಾಂಟರ್ ಡಿಕ್ಕಿಯಾಗಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಾಲೂಕಿನ ಆಗುಂಬೆಯಲ್ಲಿ ಹೋಟೆಲ್ ಮಂದಾರ್ತಿ ಗ್ರಾಂಡ್ ಎದುರು ನಡೆದಿದೆ.

ತೀರ್ಥಹಳ್ಳಿ ಪಟ್ಟಣದ ದೊಡ್ಡಮನೆಕೇರಿಯ ಸಲ್ಮಾನ್ ಮೃತ ದುರ್ಧೈವಿ. ಈತ ಕ್ಯಾಂಟರ್ ಒಳಗೆ ಮಲಗಿದ್ದನು. ಈ ವೇಳೆ ಚಾಲಕ ನಿಯಂತ್ರಣ ತಪ್ಪಿ ನಿಂತಿದ್ದ ಟಿಪ್ಪರ್ ಲಾರಿಗೆ ಹಿಂಬದಿಯಿಂದ ಗುದ್ದಿದ ಪರಿಣಾಮ ಸಲ್ಮಾನ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಚಾಲಕಮ ಸ್ಥಿತಿ ಗಂಭೀರ ಗಾಯವಾಗಿದ್ದು ಉಡುಪಿಯ ಮಣಿಪಾಲ ಆಸ್ಪತ್ರೆಗೆ ರವಾನಿಸಲಾಗಿದೆ.

ಆಗುಂಬೆಯಿಂದ ತೀರ್ಥಹಳ್ಳಿಗೆ ಕ್ಯಾಂಟರ್ ಬರುವ ವೇಳೆ ಈ ದುರ್ಘಟನೆ ನಡೆದಿದ್ದು ಕ್ಯಾಂಟರ್ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿದೆ.

ಸಲ್ಮಾನ್ ಮೃತದೇಹ ತೀರ್ಥಹಳ್ಳಿಯ ಶವಾಗಾರದಲ್ಲಿ ಇರಿಸಲಾಗಿದ್ದು ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Leave a Comment

error: Content is protected !!