ಕನ್ನಡ ಭಾಷಾ ನೈಪುಣ್ಯತೆ ಬೆಳೆಸಿಕೊಂಡಲ್ಲಿ ಪರಿಪೂರ್ಣ ವ್ಯಕ್ತಿಯಾಗಲು ಸಾಧ್ಯ ; ಬೇಳೂರು ಗೋಪಾಲಕೃಷ್ಣ

Written by Malnadtimes.in

Published on:

WhatsApp Group Join Now
Telegram Group Join Now

RIPPONPETE | ವಿದ್ಯಾರ್ಥಿ ದೆಸೆಯಲ್ಲಿಯೇ ಕನ್ನಡ ಭಾಷೆಯ ನೈಪುಣ್ಯತೆ ಬೆಳಸಿಕೊಂಡಲಿ ಪರಿಪೂರ್ಣ ವ್ಯಕ್ತಿಯಾಗಿ ರೂಪುಗೊಳ್ಳಲು ಸಾಧ್ಯವೆಂದು ಶಾಸಕ ಹಾಗೂ ರಾಜ್ಯ ಅರಣ್ಯ ಕೈಗಾರಿಕಾಭಿವೃದ್ದಿ ನಿಗಮದ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ (Beluru Gopalakrishna) ಹೇಳಿದರು.

ರಿಪ್ಪನ್‌ಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗ) ನೀಡ್ ಬೇಸ್ ಸಂಸ್ಥೆ ಹಾಗೂ ಶಾಸಕರ ಸಹಭಾಗಿತ್ವದಲ್ಲಿ ಸರ್ಕಾರಿ ಪ್ರೌಢಶಾಲಾ  ವಿದ್ಯಾರ್ಥಿಗಳಿಗೆ  ನೋಟ್ ಬುಕ್ ವಿತರಿಸಿ ಮಾತನಾಡಿ, ಸರ್ಕಾರಿ ಶಾಲೆ ಕಾಲೇಜ್‌ಗಳಲ್ಲಿ ಹೆಚ್ಚಾಗಿ ವ್ಯಾಸಂಗ ಮಾಡುತ್ತಿರುವ ಬಡವಿದ್ಯಾರ್ಥಿಗಳಿಗಾಗಿ ಸರ್ಕಾರ ಸಾಕಷ್ಟು ಸೌಲಭ್ಯಗಳನ್ನು ನೀಡುತ್ತಿದ್ದು ಈ ಸೌಲಭ್ಯದ ಸದ್ಬಳಕೆ ಮಾಡಿಕೊಳ್ಳುವಂತೆ ತಿಳಿಸಿ, ನೀಡ್‌ಬೇಸ್ ಸಂಸ್ಥೆಯವರು ತೀರ್ಥಹಳ್ಳಿ ತಾಲ್ಲೂಕು ಸೇರಿದಂತೆ ರಾಜ್ಯದ ಹಲವು ಕಡೆಯಲ್ಲಿನ ಸರ್ಕಾರಿ ಪ್ರೌಢಶಾಲೆಗಳಲ್ಲಿನ ವಿದ್ಯಾರ್ಥಿಗಳಿಗೆ ನೋಟ್ ಬುಕ್ ವಿತರಣೆ ಮಾಡಲಾಗುತ್ತಿದ್ದು ಅದನ್ನು ವಿಸ್ತರಿಸಿ ಹೊಸನಗರ ತಾಲ್ಲೂಕಿನ ವ್ಯಾಪ್ತಿಯಲ್ಲಿನ ವಿದ್ಯಾರ್ಥಿಗಳಿಗೂ ಈ ಸೌಲಭ್ಯವನ್ನು  ನೀಡುವ ಮೂಲಕ ತಮ್ಮ ವ್ಯಯಕ್ತಿಕ ಆರ್ಥಿಕ ನೆರವು ಕಲ್ಪಿಸುವುದಾಗಿ ತಿಳಿಸಿದ ಅವರು, ಮುಂದಿನ ವರ್ಷದಲ್ಲಿ ತಾಲ್ಲೂಕಿನ ಎಲ್ಲ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಸೌಲಭ್ಯ ಕಲ್ಪಿಸುವಂತೆ ಆಯೋಜಕರಿಗೂ ಕಿವಿಮಾತು ಹೇಳಿದರು.

ಈ ವರ್ಷದ ಎಸ್.ಎಸ್.ಎಲ್.ಸಿ.ಫಲಿತಾಂಶ ಉತ್ತಮ ಪ್ರಗತಿ ಹೊಂದಿದ್ದು ಬರುವ ಶೈಕ್ಷಣಿಕ ವರ್ಷದಲ್ಲಿ ಶೇ. 100 ರಷ್ಟು ಫಲಿತಾಂಶ ಗಳಿಸುವಂತೆ ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕ ವೃಂದದವರಿಗೆ ಕರೆ ನೀಡಿ, ಎಲ್ಲಿಯೂ ವ್ಯಾಸಂಗದಿಂದ ವಿದ್ಯಾರ್ಥಿಗಳು ಹಿಂದುಳಿಯದಂತೆ ಮಾಡುವ ಜವಾಬ್ದಾರಿ ಶಿಕ್ಷಕರದಾಗಬೇಕು ಎಂದರು.

ಎಸ್.ಡಿ.ಎಂ.ಸಿ.ಅಧ್ಯಕ್ಷ ಪ್ರಶಾಂತ ಅಧ್ಯಕ್ಷತೆ ವಹಿಸಿದ್ದರು. ಗ್ರಾಮ ಪಂಚಾಯಿತ್ ಅಧ್ಯಕ್ಷೆ  ಧನಲಕ್ಷ್ಮಿ, ನೀಡ್ ಬೇಸ್ ಸಂಸ್ಥೆಯ ಆದರ್ಶ ಹುಂಚದಕಟ್ಟೆ, ಮಾಸ್ತಿಕಟ್ಟೆ ಸುಬ್ರಹ್ಮಣ್ಯ, ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಮೌಳಿಗೌಡ, ಹೋಬಳಿ ಘಟಕದ ಅಧ್ಯಕ್ಷ ಗಣಪತಿ ಗವಟೂರು, ಡಿ.ಈ.ಮಧುಸೂಧನ, ಎನ್.ಚಂದ್ರೇಶ್, ಆಸಿಫ್‌ಭಾಷಾ, ಪ್ರಕಾಶ ಪಾಲೇಕರ್, ರವೀಂದ್ರ ಕೆರೆಹಳ್ಳಿ, ಶ್ರೀಧರ, ದೈಹಿಕ ಶಿಕ್ಷಣ ಸಂಯೋಜಕ ಬಾಲಚಂದ್ರ, ಸಂಪನ್ಮೂಲ ವ್ಯಕ್ತಿ ರಂಗನಾಥ, ಉಪಪ್ರಾಚಾರ್ಯ ಕೆಸವಿನಮನೆ ರತ್ನಾಕರ್, ರಾಘವೇಂದ್ರ ಇನ್ನಿತರರು ಹಾಜರಿದ್ದರು.

ಉಪಪ್ರಾಚಾರ್ಯ ಕೆಸವಿನಮನೆ ರತ್ನಾಕರ್ ಸ್ವಾಗತಿಸಿದರು. ಶಿಕ್ಷಕ ಚಂದ್ರಪ್ಪ ನಿರೂಪಿಸಿದರು.

Leave a Comment

error: Content is protected !!