ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿಗೆ ಗ್ರಾಮೀಣ ವಿದ್ಯಾರ್ಥಿಗಳಿಗೆ ಆಧ್ಯತೆ ; ಬೇಳೂರು ಗೋಪಾಲಕೃಷ್ಣ

Written by Malnadtimes.in

Published on:

WhatsApp Group Join Now
Telegram Group Join Now

RIPPONPETE | ಇಂದಿನ ದಿನಗಳಲ್ಲಿ ಪಟ್ಟಣದಲ್ಲಿ ಸಾಕಷ್ಟು ಸ್ಪರ್ಧಾತ್ಮಕ ಪರೀಕ್ಷೆಗೆ  ಖಾಸಗಿಯಾಗಿ ತರಬೇತಿ ಶಿಬಿರಗಳು ನಡೆಯುತ್ತಿರುತ್ತವೆ. ಇದರಿಂದಾಗಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಹೆಚ್ಚು ಹಣವನ್ನು ಖರ್ಚು ಮಾಡಿಕೊಂಡು ಹೋಗಿ ಪಡೆಯುವುದು ದುಸ್ಥರವಾಗಿದೆ. ಆದ್ದರಿಂದ ರಿಪ್ಪನ್‌ಪೇಟೆ ಸರ್ಕಾರಿ ಪ್ರದವಿ ಪೂರ್ವ ಕಾಲೇಜ್‌ನಲ್ಲಿ ವಾರದಲ್ಲಿ ಎರಡ್ಮೂರು ದಿನ ನುರಿತ ಉಪನ್ಯಾಸಕರಿಂದ ಹಲವು ಸ್ಪರ್ಧಾತ್ಮಕ ಪರೀಕ್ಷೆಗೆ ವಿದ್ಯಾರ್ಥಿ ದೆಸೆಯಲ್ಲಿ ತರಬೇತಿ ನೀಡುವ ಸೌಲಭ್ಯ ಕಲ್ಪಿಸಲಾಗುತ್ತಿದೆ ಎಂದು ಶಾಸಕ ರಾಜ್ಯ ಅರಣ್ಯ ಕೈಗಾರಿಕಾಭಿವೃದ್ಧಿ ನಿಗಮದ ಅಧ್ಯಕ್ಷ  ಬೇಳೂರು ಗೋಪಾಲಕೃಷ್ಣ (Beluru Gopalakrishna) ಹೇಳಿದರು.

ರಿಪ್ಪನ್‌ಪೇಟೆಯ ಸರ್ಕಾರಿ ಪದವಿಪೂರ್ವ ಕಾಲೇಜ್‌ನಲ್ಲಿ ಆಯೋಜಿಸಲಾದ ಕೆಸಿಇಟಿ/ಎನ್‌ಇಇಟಿ/ಜೆಇಇ/ವೃತ್ತಿ ತರಬೇತಿ ಮಾಹಿತಿ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಗ್ರಾಮೀಣ ಭಾಗದಲ್ಲಿನ ವಿದ್ಯಾರ್ಥಿಗಳು ಸಹ ಸ್ಪರ್ಧಾತ್ಮಕ ವೃತ್ತಿ ಪರ ಶಿಕ್ಷಣ ತರಬೇತಿ ಪಡೆಯುವ ಮೂಲಕ  ಸರ್ಕಾರಿ ಮತ್ತು ಖಾಸಗಿ ಉದ್ಯೋಗವನ್ನು ಪಡೆಯುವುದರೊಂದಿಗೆ ಉನ್ನತ ಹುದ್ದೆಗಳಾದ ಐಎಎಸ್.ಐಪಿಎಸ್ ಹಾಗೂ ಐಎಫ್‌ಎಸ್ ಹೀಗೆ ಹಲವು ವಿವಿಧ ಇಲಾಖೆಗಳ ಉನ್ನತ ಹುದ್ದೆಗಳಲ್ಲಿ ಸೇವೆ ಪಡೆಯಲು ಸಾಧ್ಯವಾಗುವುದು.

ನಾನು ವ್ಯಾಸಂಗ ಮಾಡುವ ಸಂದರ್ಭದಲ್ಲಿ ಸಾಕಷ್ಟು ಅರ್ಥಿಕವಾಗಿ ಹಿಂದೆ ಉಳಿದಿದ್ದು ಪೋಷಕರು ಸಾಕಷ್ಟು ಸಂಕಷ್ಟದ ಪರಿಸ್ಥಿತಿ ಎದುರಿಸುವಂತಹ ಕಾಲದಲ್ಲಿ ದೂರದ ಸಾಗರಕ್ಕೆ ಬಂದು ವ್ಯಾಸಂಗ ಮಾಡುವಂತಾಗಿತು. ಈಗ ಅರ್ಥಿಕವಾಗಿ ಮುಂದೆ ಬಂದಿದ್ದು ಮಕ್ಕಳ ವಿದ್ಯಾಭ್ಯಾಸಕ್ಕೆ ಪೋಷಕರು ಹೆಚ್ಚು ಆಸಕ್ತಿ ವಹಿಸುತ್ತಿದ್ದು ಕೆಲವು ಸ್ಪರ್ಧಾತ್ಮಕ  ಪರೀಕ್ಷೆಗಳಿಗೆ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ದೂರದ ಶಿವಮೊಗ್ಗ, ಸಾಗರ, ತೀರ್ಥಹಳ್ಳಿ ಹೋಗಿ ತರಬೇತಿ ಪಡೆಯುವುದು ಕಷ್ಟಕರವಾಗಿದ್ದು ಅದನ್ನು ಕಂಡು ನಾನು ಸರ್ಕಾರಿ ಪದವಿ ಪೂರ್ವ ಕಾಲೇಜ್‌ನಲ್ಲಿಯೇ ಇಂತಹ ಕಾರ್ಯಾಗಾರವನ್ನು ನಡೆಸುವುದರೊಂದಿಗೆ  ಗ್ರಾಮೀಣ ವಿದ್ಯಾರ್ಥಿಗಳಿಗೆ ಕಡಿಮೆ ಖರ್ಚಿನಲ್ಲಿ ಹೆಚ್ಚು ಉಪಯುಕ್ತವಾಗುವಂತೆ ಮಾಡಿದ್ದು ಈ ಸೌಲಭ್ಯದ  ಸದುಪಯೋಗ ಪಡೆದುಕೊಳ್ಳುವಂತೆ ಕರೆ ನೀಡಿದರು.

ಈ ಕಾರ್ಯಾಗಾರದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಸಿಡಿಸಿ ಉಪಾಧ್ಯಕ್ಷ ಜಿ.ಆರ್.ಗೋಪಾಲಕೃಷ್ಣ ವಹಿಸಿದ್ದರು.

ಸರ್ಕಾರಿ ಪದವಿ ಪೂರ್ವ ಕಾಲೇಜ್ ಪ್ರಭಾರ ಪ್ರಾಚಾರ್ಯ ವಾಸುದೇವ, ಗ್ರಾಮ ಪಂಚಾಯಿತ್ ಅಧ್ಯಕ್ಷೆ ಧನಲಕ್ಷ್ಮಿ, ಉಪಾಧ್ಯಕ್ಷ ಸುಧೀಂದ್ರ ಪೂಜಾರಿ, ಸಿಡಿಸಿ ಸಮಿತಿಯವರು ಮತ್ತು ಉಪನ್ಯಾಸಕ ವೃಂದ ಗ್ರಾಮ ಪಂಚಾಯಿತ್ ಸದಸ್ಯರಾದ ಡಿ.ಈ.ಮಧುಸೂಧನ್, ಮಹಾಲಕ್ಷ್ಮಿ, ಗಣಪತಿ ಗವಟೂರು, ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಮೌಳಿ ಹಾಜರಿದ್ದರು.

ವಿದ್ಯಾರ್ಥಿನಿ ಪ್ರಣತಿ ಪ್ರಾರ್ಥಿಸಿದರು. ಉಪನ್ಯಾಸಕ ಸ್ವಾಗತಿಸಿದರು. ಪ್ರಭಾರ ಪ್ರಾಚಾರ್ಯ ಪ್ರಾಸ್ತಾವಿಕವಾಗಿ ಮಾತನಾಡಿದರು.

Leave a Comment

error: Content is protected !!